ಬಂಟ್ವಾಳ

ತುಳುವಿಗೆ ರಾಜ್ಯಭಾಷೆ: ಸಿಎಂಗೆ ಶಾಸಕ ರಾಜೇಶ್ ನಾಯ್ಕ್ ಪತ್ರ

ತುಳುಭಾಷೆಗೆ ರಾಜ್ಯಭಾಷೆಯ ಸ್ಥಾನಮಾನಕೊಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಪತ್ರ ಬರೆದಿದ್ದಾರೆ.

ಜಾಹೀರಾತು

ತುಳುಭಾಷೆ ಹಾಗೂ ತುಳುನಾಡಿನ ಜನರು ತಮ್ಮ ಭಾಷೆಯ ಮೇಲೆ ಅಪಾರವಾದ ಅಭಿಮಾನವನ್ನು ಹೊಂದಿದ್ದಾರೆ. ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಬೇಕೆನ್ನುವುದು ಸಮಸ್ತ ತುಳುವರ ಹಲವು ವರ್ಷದ ಬೇಡಿಕೆಯಾಗಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.  ತುಳುವಿಗೆ ತನ್ನದೇ ಆದ ಲಿಪಿ ಕೂಡ ಇದ್ದು,ಪ್ರಸ್ತುತ ದ.ಕ.,ಉಡುಪಿ ಜಿಲ್ಲೆಯ ಶಾಲೆಗಳಲ್ಲು 6 ನೇ ತರಗತಿತಿಂದ 10ನೇ ತರಗತಿಯವರೆಗೆ 2009 ರಿಂದಲೇ ತುಳುಪಠ್ಯವನ್ನು ತೃತೀಯಭಾಷೆಯನ್ನಾಗಿ ಬೋಧಿಸಲಾಗುತ್ತಿದೆ ಹಾಗೆಯೇ ಪದವಿ,ಸ್ನಾತಕೋತ್ತರ ವಿಭಾಗದಲ್ಲಿಯು ತುಳುಪಠ್ಯವನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಿರುವ ಶಾಸಕ ರಾಜೇಶ್ ನಾಯ್ಕ್ ತುಳುಭಾಷೆಯ ಉಳಿವಿಗೆ ಮಾನ್ಯತೆಯನ್ನು ಸಲ್ಲಿಸುವ ಅವಕಾಶ ಬಂದಿದ್ದು,ಸಂವಿಧಾನದ 8 ನೇ ಪರಿಚ್ಚೇಧಕ್ಕೆ ಸೇರಿಸಲು ಪೂರಕವಾಗಿ ತುಳುವನ್ನು ರಾಜ್ಯದ ಅಧಿಕೃತಭಾಷೆಯಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts