ಬಂಟ್ವಾಳ

ಇರಾದಲ್ಲಿ ಫಲಾನುಭವಿಗಳಿಗೆ ಕುಕ್ಕುಟ ವಿತರಣೆ

ಫಲಾನುಭವಿಗಳಿಗೆ ಉಚಿತವಾಗಿ ಕೋಳಿಗಳನ್ನು ವಿತರಿಸುವ ಕಾರ್ಯ ಇರಾ ಗ್ರಾಪಂ ವಠಾರದಲ್ಲಿ ನಡೆಯಿತು.

ಜಾಹೀರಾತು

2019–20ನೇ ಸಾಲಿನಲ್ಲಿ ಪಶುಸಂಗೋಪನೆ ಇಲಾಖೆ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿಯ ಕ್ರೀಯಾ ಯೋಜನೆಯಡಿ 5 ಸಾವಿರ ರೂ ಘಟಕ ವೆಚ್ಚದಡಿಯಲ್ಲಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಶಿಪಾರಸ್ಸಿನಂತೆ ಇರಾ ಗ್ರಾಮದ ಬಡಕುಟುಂಬಗಳ ಆರ್ಥಿಕ ಸಬಲೀಕರಣ ಮತ್ತು ಸಾರ್ವಜನಿಕರಿಗೆ ಪೌಷ್ಠಿಕ ಆಹಾರ ಯೋಜನೆಯಡಿ ಒಬ್ಬ ಫಲಾನುಭವಿಗೆ 38 ಸಂಖ್ಯೆಯ ಆಸೀಲ್ ಕ್ರಾಸ್/ನಾಟಿ ಕೋಳಿಯಂತೆ 16 ಸಾಮಾನ್ಯ, 4 ಪರಿಶಿಷ್ಠ ಜಾತಿ, 1 ಪರಿಶಿಷ್ಟ ಪಂಗಡ ಒಟ್ಟು 21 ಫಲಾನುಭವಿಗಳಿಗೆ ಉಚಿತವಾಗಿ ಕೋಳಿಗಳನ್ನು ವಿತರಿಸಲಾಯಿತು.

ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಕುಕ್ಕುಟ ಮಹಾಮಂಡಳಿಯ ಸಹಾಯಕ ನಿರ್ದೇಶಕ ಡಾ. ಸುರೇಶ್ ಗ್ರಾ. ಪಂ. ಸದಸ್ಯರಾದ ಎಂ.ಬಿ. ಉಮ್ಮರ್, ಮೊಯಿದಿ ಕುಂಞಿ, ಪಾರ್ವತಿ, ಜಾನುವಾರು ಅಭಿವೃದ್ದಿ ಅಧಿಕಾರಿ ಕೃಷ್ಣಮೂರ್ತಿ ಜಿ. ಉಪಸ್ಥಿತರಿದ್ದರು. ಪಶುವೈದ್ಯಾದಿಕಾರಿ ಡಾ. ಅವಿನಾಶ್ ಭಟ್ ಅವರು ಕೋಳಿ ಸಾಕಾಣಿಕೆ ಬಗ್ಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ