ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆಯನ್ನು ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶಿರಸ್ತೇದಾರ್ ಶ್ರೀಧರ್, ಸಮಾಜದಲ್ಲಿ ನಾವು ಎಲ್ಲರೊಂದಿಗೆ ಪರಸ್ಪರ ಸಹಕಾರದಿಂದ ಬದುಕಬೇಕು. ಪ್ರತಿಯೊಬ್ಬರೂ ನೈತಿಕ ಮೌಲ್ಯಗಳನ್ನು ಅಳವಡಿಸಿ ಕೊಳ್ಳಬೇಕೆಂಬುದೇ ಸರ್ವಜ್ಞರ ವಚನಗಳ ಸಾರ ಎಂದರು.
ತ್ರಿಪದಿಗಳ ಮೂಲಕ ನೈತಿಕ ಮೌಲ್ಯಗಳನ್ನು ಸಾರಿದ ಮಹಾನುಭಾವ ಸರ್ವಜ್ಞ, ಇಂತಹಾ ಮಹಾನುಭವರ ಆದರ್ಶಗಳನ್ನು ಮುಂದಿನ ಜನಾಂಗಕ್ಕೂ ತಿಳಿಸಿಕೊಡುವ ಕೆಲಸ ಆಗಬೇಕಿದೆ ಎಂದು ಪ್ರಧಾನ ಭಾಷಣ ಮಾಡಿದ ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಉಪನ್ಯಾಸಕಿ ಕವಿತಾ ಯಾದವ್ ಹೇಳಿದರು.
ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಲಾಲ ಯುವ ವೇದಿಕೆ ಗೌರವಾಧ್ಯಕ್ಷ ನಾರಾಯಣ ಸಿ. ಪೆರ್ನೆ, ಪುರಸಭಾ ಸದಸ್ಯ ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಸದಾಶಿವ ಬಂಗೇರ, ಜಯರಾಜ್ ಎಸ್.ಬಂಗೇರ, ಮಚ್ಛೇಂದ್ರ ಸಾಲಿಯಾನ್, ಉದ್ಯಮಿ ಸುರೇಶ್ ಸಾಲಿಯಾನ್, ಪಾಣೆಮಂಗಳೂರು ನಾಡ ಕಚೇರಿ ಉಪತಹಸೀಲ್ದಾರ್ ರೂಪೇಶ್, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಶಿರಸ್ತೇದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127
Be the first to comment on "ಬಂಟ್ವಾಳದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ"