ಬಂಟ್ವಾಳ

ಬಂಟ್ವಾಳದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆಯನ್ನು ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಾಡಲಾಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಶಿರಸ್ತೇದಾರ್ ಶ್ರೀಧರ್, ಸಮಾಜದಲ್ಲಿ ನಾವು ಎಲ್ಲರೊಂದಿಗೆ ಪರಸ್ಪರ ಸಹಕಾರದಿಂದ ಬದುಕಬೇಕು. ಪ್ರತಿಯೊಬ್ಬರೂ ನೈತಿಕ ಮೌಲ್ಯಗಳನ್ನು ಅಳವಡಿಸಿ ಕೊಳ್ಳಬೇಕೆಂಬುದೇ ಸರ್ವಜ್ಞರ ವಚನಗಳ ಸಾರ ಎಂದರು.

ತ್ರಿಪದಿಗಳ ಮೂಲಕ‌ ನೈತಿಕ ಮೌಲ್ಯಗಳನ್ನು ಸಾರಿದ ಮಹಾನುಭಾವ ಸರ್ವಜ್ಞ, ಇಂತಹಾ ಮಹಾನುಭವರ ಆದರ್ಶಗಳನ್ನು ಮುಂದಿನ ಜನಾಂಗಕ್ಕೂ ತಿಳಿಸಿಕೊಡುವ ಕೆಲಸ ಆಗಬೇಕಿದೆ ಎಂದು ಪ್ರಧಾನ ಭಾಷಣ ಮಾಡಿದ ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಉಪನ್ಯಾಸಕಿ ಕವಿತಾ ಯಾದವ್ ಹೇಳಿದರು.

ಜಾಹೀರಾತು

ಕೇಂದ್ರ ಸ್ಥಾನೀಯ ಶಿರಸ್ತೇದಾರ್  ರಾಧಾಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಲಾಲ ಯುವ ವೇದಿಕೆ‌ ಗೌರವಾಧ್ಯಕ್ಷ ನಾರಾಯಣ ಸಿ. ಪೆರ್ನೆ, ಪುರಸಭಾ ಸದಸ್ಯ ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಸದಾಶಿವ ಬಂಗೇರ, ಜಯರಾಜ್ ಎಸ್.ಬಂಗೇರ, ಮಚ್ಛೇಂದ್ರ ಸಾಲಿಯಾನ್, ಉದ್ಯಮಿ ಸುರೇಶ್ ಸಾಲಿಯಾನ್, ಪಾಣೆಮಂಗಳೂರು ನಾಡ ಕಚೇರಿ ಉಪತಹಸೀಲ್ದಾರ್ ರೂಪೇಶ್,  ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಶಿರಸ್ತೇದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ