ದಲಿತ ವಚನಕಾರರು ಸಮಾಜದ ಓರೆ ಕೋರೆಗಳನ್ನು ತಿದ್ದುವ ಕೆಲಸ ಮಾಡಿದ್ಜಾರೆ. 12 ನೇ ಶತಮಾನದಲ್ಲಿಯೇ ಮಾನವರೆಲ್ಲರೂ ಒಂದೇ ಎಂದು ತೋರಿಸಿಕೊಟ್ಟ ಅವರ ವಚನಗಳು ಇಂದಿನ ಸಮಾಜಕ್ಕೆ ಹೆಚ್ಚು ಪ್ರಸ್ತುತವಾಗುತ್ತದೆ ಎಂದು ಪಾಣೆಮಂಗಳೂರು ನಾಡಕಚೇರಿ ಉಪತಹಸೀಲ್ದಾರ್ ರೂಪೇಶ್ ಹೇಳಿದರು.
ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ರಾಜೇಶ್ ನಾಯ್ಕ್ ಮಾತನಾಡಿ, ದಲಿತ ವಚನಕಾರರು ಉಳಿದವರಿಗೆ ಸರಿಸಮಾನವಾಗಿ ನಿಂತು ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ತಮ್ಮ ತೀಕ್ಷ್ಣ ನುಡಿಗಳಿಂದ ಯಾವುದೇ ಹಿಂಜರಿಕೆಯಿಲ್ಲದೆ ವಚನಗಳನ್ನು ರಚಿಸಿದರು ಎಂದರು. ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿಗಳು. ಗ್ರಾಮ ಲೆಕ್ಕಾಧಿಕಾರಿ. ಗ್ರಾಮ ಸಹಾಯಕರು ಉಪಸ್ಥಿತರಿದ್ದರು.