ಸಾಧಕರು

ಐಸ್ ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಚಿನ್ನದ ಪದಕ ನೀಡಿ ಅಭಿನಂದನೆ

ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಂಗಳೂರಿನ ಕುಮಾರಿ ಅನಘಾ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಿನ್ನದ ಪದಕ ನೀಡಿ ಅಭಿನಂದಿಸಿದರು.

ಜಾಹೀರಾತು

ಐಸ್ ಸ್ಕೇಟಿಂಗ್ ಅನ್ನುವ ಅಪರೂಪದ ಹಾಗೂ ಕಷ್ಟಕರವಾದ ಕ್ರೀಡೆಯಲ್ಲಿ ಅತೀ ಕಿರಿಯ ವಯಸ್ಸಿನಲ್ಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದು ನಮ್ಮ ಜಿಲ್ಲೆಯ ಕೀರ್ತಿ ಪತಾಕೆ‌ಯನ್ನು ಹಾರಿಸಿದ ಅನಘಾ ಇನ್ನಷ್ಟು ಸಾಧನೆ ಮಾಡುವಂತೆ ಮಂಜುನಾಥ ಸ್ವಾಮಿ ಹರಸಲಿ ಎಂದು ಅವರು ಆಶೀರ್ವದಿಸಿದರು.ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ,ಅನಘಾ ರ ತಂದೆ ಡಾ.ರಾಜೇಶ್ ಹುಕ್ಕೇರಿ,ತಾಯಿ ಡಾ.ಅನಿತಾ ರಾಜೇಶ್, ಅಜ್ಜಿ ಮೀನಾಕ್ಷಿ ಆರ್ ಪುತ್ರನ್ ಜೊತೆಗಿದ್ದರು.

ಅನಘಾ ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅನಘಾ ಈವರೆಗೆ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 23 ಚಿನ್ನದ ಪದಕ,9 ಬೆಳ್ಳಿ ಹಾಗೂ 6 ಕಂಚಿನ‌ ಪದಕ ಪಡೆದಿದ್ದಾರೆ.ಮಂಗಳೂರಿನ‌ ಅನಘಾ ಡೆಂಟಲ್ ಸ್ಪೆಷಾಲಿಟಿ ಕ್ಲಿನಿಕ್ ನ ವೈದ್ಯರಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಅನಘಾ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿರುವ ಅನಘಾ, ಮಂಗಳೂರಿನಲ್ಲಿ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಕುಕ್ಯಾನ್ ಅವರಿಂದ ರೋಲರ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts