ಯುವಕರು ರಕ್ತದಾನ ಮಾಡಲು ಮುಂದೆ ಬನ್ನಿ: ಹರೇಕಳ ಹಾಜಬ್ಬ 

ಯುವಕರು ರಕ್ತದಾನ ಮಾಡಲು ಮುಂದೆ  ಬರಬೇಕು, ಇತರರಿಗೆ ಪ್ರೇರಣೆಯಾಗಬೇಕು ಎಂದು ಅಕ್ಷರ ಸಂತ, ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಹರೇಕಳ ಹಾಜಬ್ಬ ಹೇಳಿದ್ದಾರೆ.

ಫ್ಯೂಚರ್ ಕ್ರಿಯೇಟರ್ಸ್ ಚಾರೀಟೇಬಲ್ ಟ್ರಸ್ಟ್ ಅಸೋಸಿಯೇಷನ್(ರಿ), ಶೈನ್ ಗೈಸ್ ಕುಕ್ಕಾಜೆ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಮಂಚಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.  ಈ ಸಂದರ್ಭ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಗಫ್ಫಾರ್ ಸಾಗರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರವನ್ನು ಜಿಪಂ ಸದಸ್ಯ ಎಂ.ಎಸ್. ಮೊಹಮ್ಮದ್ ಉಪಸ್ಥಿತಿಯಲ್ಲಿ, ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ಉಸ್ತಾದರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು, ರೆ.ಫಾ. ಹೆನ್ರಿ ಡಿಸೋಜ, ಕುಕ್ಕಾಜೆ ಜುಮಾ‌ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ.ಎ.ಆರ್, ಮಂಚಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ದಾಸ್, ಅಶ್ರಫ್ ಕಲ್ಕಟ್ಟ, ಅಬ್ದುಲ್ ಕರೀಂ, ಕೆ.ಎಂ. ಶರೀಫ್, ಹಸೈನಾರ್, ಆಶಿಕ್ ಕುಕ್ಕಾಜೆ, ರಫೀಕ್, ನಝೀರ್  ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವೇಷ ಧರಿಸಿ ಹಣ ಸಂಗ್ರಹಿಸಿ ಬಡ ರೋಗಿಗಳಿಗೆ ನೆರವಾದ ವಿಕ್ಕಿ‌ ಶೆಟ್ಟಿ ಬೆದ್ರ ಅವರನ್ನು ಸನ್ಮಾನಿಸಲಾಯಿತು.

ಯಶಸ್ವಿಯಾಗಿ ನಡೆದ  ರಕ್ತದಾನ ಶಿಬಿರದಲ್ಲಿ ಒಟ್ಟು 100 ಮಂದಿ ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವಕರು ರಕ್ತದಾನ ಮಾಡಲು ಮುಂದೆ ಬನ್ನಿ: ಹರೇಕಳ ಹಾಜಬ್ಬ "

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*