ಫ್ಯೂಚರ್ ಕ್ರಿಯೇಟರ್ಸ್ ಚಾರೀಟೇಬಲ್ ಟ್ರಸ್ಟ್ ಅಸೋಸಿಯೇಷನ್(ರಿ), ಶೈನ್ ಗೈಸ್ ಕುಕ್ಕಾಜೆ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಮಂಚಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಗಫ್ಫಾರ್ ಸಾಗರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರವನ್ನು ಜಿಪಂ ಸದಸ್ಯ ಎಂ.ಎಸ್. ಮೊಹಮ್ಮದ್ ಉಪಸ್ಥಿತಿಯಲ್ಲಿ, ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ಉಸ್ತಾದರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು, ರೆ.ಫಾ. ಹೆನ್ರಿ ಡಿಸೋಜ, ಕುಕ್ಕಾಜೆ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ.ಎ.ಆರ್, ಮಂಚಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ದಾಸ್, ಅಶ್ರಫ್ ಕಲ್ಕಟ್ಟ, ಅಬ್ದುಲ್ ಕರೀಂ, ಕೆ.ಎಂ. ಶರೀಫ್, ಹಸೈನಾರ್, ಆಶಿಕ್ ಕುಕ್ಕಾಜೆ, ರಫೀಕ್, ನಝೀರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವೇಷ ಧರಿಸಿ ಹಣ ಸಂಗ್ರಹಿಸಿ ಬಡ ರೋಗಿಗಳಿಗೆ ನೆರವಾದ ವಿಕ್ಕಿ ಶೆಟ್ಟಿ ಬೆದ್ರ ಅವರನ್ನು ಸನ್ಮಾನಿಸಲಾಯಿತು.
ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 100 ಮಂದಿ ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.