ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಶೌರ್ಯ ದಿವಸ ಯೋಧ ನಮನ ಕಾರ್ಯಕ್ರಮ ವಿಟ್ಲ ಶ್ರೀ ಭಗವತಿ ದೇವಸ್ಥಾನ ಸಭಾಂಗಣದಲ್ಲಿ ನಡೆಯಿತು.
ದಿಕ್ಸೂಚಿ ಭಾಷಣ ಮಾಡಿದ ಹಿಂದು ಜಾಗರಣಾ ವೇದಿಕೆ ದಕ್ಷಿಣ ಪ್ರಾಂತ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ, ಬಾಲಕೋಟ್ ದಾಳಿಯಲ್ಲಿ ಭಾರತೀಯ ಸೈನಿಕರು ತೋರಿದ ಸಾಹಸವನ್ನು ವಿವರಿಸಿದರು.
ಹಿಂದೂ ಜಾಗರಣ ವೇದಿಕೆ ಸಂಪರ್ಕ ಪ್ರಮುಖ್ ಪುತ್ತೂರು ಜಿಲ್ಲೆಯ ನರಸಿಂಹ ಶೆಟ್ಟಿ ಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಟ್ಲ ನಗರದ ಕಾರ್ಯಕಾರಿಣಿ ಸದಸ್ಯ ಜಗನ್ನಾಥ್ ಕಾಸರಗೋಡು ಮಾತನಾಡಿದರು.
ಮಾಜಿ ಸೈನಿಕರು ಹಾಗೂ ಸಭಾಧ್ಯಕ್ಷತೆ ವಹಿಸಿದ್ದ ನಾರಾಯಣ ಪುರುಷ ಕೇಪು ಯುವಕರು ಸೇನೆಯಲ್ಲಿ ಕರ್ತವ್ಯ ನಿರ್ವಹಿಸಲು ಮುಂದಾಗಬೇಕು ಹಾಗೂ ಹಿರಿಯರು ಈ ಕುರಿತಂತೆ ಹುರಿದುಂಬಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಗೋವರ್ಧನ್, ಪುತ್ತೂರು ಜಿಲ್ಲಾ ಹಿಂದೂಜಾಗರಣ ವೇದಿಕೆಯ ಅಧ್ಯಕ್ಷರಾದ ಜಗದೀಶ್ ನೆತ್ತರಕೆರೆ, ವಿಶ್ವ ಹಿಂದು ಪರಿಷತ್ ಕಾರ್ಯಾಧ್ಯಕ್ಷರಾದ ಪದ್ಮನಾಭ ಕಟ್ಟೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಾ ಪ್ರಮುಖ್ ಜತ್ತಪ್ಪ, ಹಿಂದೂ ಜಾಗರಣ ವೇದಿಕೆ ವಿಟ್ಲ ಕಾರ್ಯದರ್ಶಿ ಹರ್ಷ ವಿಠಲ, ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮನೋಜ್ ಪೆರ್ನೆ, ಸಿಎ ಬ್ಯಾಂಕ್ ಅಧ್ಯಕ್ಷರಾದ ಪುಷ್ಪರಾಜ್ ಚೌಟ ಮಾಣಿ, ಎಬಿವಿಪಿ ಪ್ರಮುಖ ವಿನೋದ್ , ಹಿಂದೂ ಜಾಗರಣ ವೇದಿಕೆಯ ತಾಲೂಕು ಉಪಾಧ್ಯಕ್ಷರಾದ ರಾಜೇಶ್ ನಾಯಕ್, ಹಿಂದೂ ಜಾಗರಣ ವೇದಿಕೆಯ ವಿಭಾಗ ಸಂಪರ್ಕ್ ಪ್ರಮುಖ್ ರತ್ನಾಕರ ಶೆಟ್ಟಿ, ಟಿ ಕೃಷ್ಣಪ್ಪ, ಶ್ರೀ ಭಗವತಿ ದೇವಸ್ಥಾನ ವಿಟ್ಲ ಇದರ ಟ್ರಸ್ಟಿ ಮೋಹನ್ ವಿ ಮತ್ತಿತರರು ಉಪಸ್ಥಿತರಿದ್ದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ