ಜಿಲ್ಲಾ ಸುದ್ದಿ

ವೈಫಲ್ಯ ಮರೆಸಲು ಕರಾಳ ಕಾನೂನು ಜಾರಿಗೆ: ಸಿಎಎ, ಎನ್.ಆರ್.ಸಿ, ಎನ್.ಪಿ.ಆರ್. ವಿರೋಧಿ ಹೋರಾಟದಲ್ಲಿ ರೈ

ಕೇಂದ್ರ ಮತ್ತು ರಾಜ್ಯ ಸರಕಾರದ ಖಜಾನೆ ಖಾಲಿಯಾಗಿದೆ. ಶಾಸಕರ ಸಹಾಯಕರಿಗೆ ಸಂಬಳ ಆಗಿಲ್ಲ. ಇವೆಲ್ಲವನ್ನೂ ಮುಚ್ಚಿಹಾಕಲು ಕರಾಳ ಕಾನೂನುಗಳನ್ನು ಜಾರಿಗೆ ತಂದು ಸರಕಾರ ಜನರ ದಾರಿ ತಪ್ಪಿಸುತ್ತಿವೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಪಾದಿಸಿದರು.

ಜಾಹೀರಾತು

ಮಾಣಿಯ ಗಾಂಧಿ ಮೈದಾನದಲ್ಲಿ ಶುಕ್ರವಾರ ಸಂವಿಧಾನ ಸಂರಕ್ಷಣಾ ಸಮಿತಿ ಮಾಣಿ ವತಿಯಿಂದ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿರಿಯ ಪತ್ರಕರ್ತ ಶಶಿಧರ್ ಭಟ್, ಪ್ರಗತಿಪರ ಹೋರಾಟಗಾರ್ತಿ ನೇಮಿಚಂದ್ರ ಮಾತನಾಡಿ, ಸಂವಿಧಾನ ಉಳಿಸಲು ಒಗ್ಗಟ್ಟಗುವಂತೆ ಕರೆ ನೀಡಿದರು.ಸಾಮಾಜಿಕ ಹೋರಾಟಗಾರ ಹನೀಫ್ ಖಾನ್ ಕೋಡಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಜಿಲ್ಲೆಯ ವಕೀಲ ಅಮೀನ್ ಮೊಹ್ಸಿನ್, ಎಸ್ಕೆಎಸ್ಸೆಸ್ಸೆಫ್ ನಾಯಕ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಜೆಡಿಎಸ್ ಮುಖಂಡ ಎಂ.ಬಿ.ಸದಾಶಿವ ಸುಳ್ಯ, ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಪ್ರಸಾದ್, ಮಾಜಿ ಪೊಲೀಸ್ ಅಕಾರಿ ಜಿ.ಎ.ಬಾವ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮುಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸದಸ್ಯ ಆದಂ ಕುಂಞಿ, ನೇರಳಕಟ್ಟೆ ಸಿ.ಎ. ಬ್ಯಾಂಕ್ ನಿರ್ದೇಶಕ ನಿರಂಜನ್ ರೈ, ಕಲ್ಲಡ್ಕ ಜುಮಾ ಮಸೀದಿ ಖತೀಬ್ ಶೇಖ್ ಮುಹಮ್ಮದ್ ಇರ್ಫಾನಿ, ಮಾಣಿ ದಾರುಲ್ ಇರ್ಶಾದ್ ಸ್ಥಾಪಕಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್, ಸಂವಿಧಾನ ಸಂರಕ್ಷಣಾ ಸಮಿತಿ ಮಾಣಿ ಸಂಚಾಲಕ ಸುದೀಪ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಆಳ್ವ, ಕುಶಲ ಎಂ. ಪೆರಾಜೆ, ಕೋಡಾಜೆ ಜುಮಾ ಮಸೀದಿ ಅಧ್ಯಕ್ಷ ಇಬ್ರಾಹೀಂ ರಾಜ್‌ಕಮಲ್, ಕೋಶಾಕಾರಿ ರಫೀಕ್ ಸುಲ್ತಾನ್, ಮಜೀದ್ ದಾರಿಮಿ, ಸೂರಿಕುಮೇರು ಜುಮಾ ಮಸೀದಿ ಅಧ್ಯಕ್ಷ ಮೂಸಾ ಕರೀಂ ಮಾಣಿ ಉಪಸ್ಥಿತರಿದ್ದರು. ಸಂವಿಧಾನ ಸಂರಕ್ಷಣಾ ಸಮಿತಿ ಮಾಣಿಯ ಪ್ರಧಾನ ಕಾರ್ಯದರ್ಶಿ ಹಮೀದ್ ಖಂದಕ್ ಮಿತ್ತೂರು ಸ್ವಾಗತಿಸಿದರು. ರಶೀದ್ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ, ಅಶ್ರಫ್ ಅರಬಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು. ಹೋರಾಟಗಾರ್ತಿ ನೇಮಿಚಂದ್ರ ತಂಡದಿಂದ ಕ್ರಾಂತಿ ಗೀತೆ ಹಾಡಲಾಯಿತು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ