ಬಂಟ್ವಾಳ

ಬಂಟ್ವಾಳದಲ್ಲಿ ರಾಜ್ಯ ರೈತಸಂಘದಿಂದ ಅಧ್ಯಯನ ಕಾರ್ಯಾಗಾರ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಒಂದು ದಿನದ ಅಧ್ಯಯನ ಶಿಬಿರ ಮಾ.3 ರಂದು ಮಂಗಳವಾರ ಬಿ.ಸಿ.ರೋಡಿನ ರಂಗೋಲಿ ಸಭಾಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ಹೇಳಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಸ್ವರಾಜ್ ಇಂಡಿಯಾ ರಾಜ್ಯಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಉದ್ಘಾಟಿಸಲಿದ್ದು, ರೈತಸಂಘ ರಾಜ್ಯಾಧ್ಯಕ್ಷ ಬಡಗಲಾಪುರ ನಾಗೇಂದ್ರ, ಪ್ರಮುಖರಾದ ನಾಗರತ್ನಮ್ಮ ವಿ.ಪಾಟೀಲ್, ಜಿ.ಟಿ.ರಾಮಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಡಾ. ಸಂದೀಪ್ ನಾಯಕ್, ಮೂಡಿಗೆರೆ ಮಂಜುನಾಥ್, ರವಿಕಿರಣ್ ಪುಣಚ ಭಾಗವಹಿಸುವರು.

ಬಳಿಕ ಇಡೀ ದಿನ ರೈತಸಂಘದ ಹುಟ್ಟು ಬೆಳವಣಿಗೆ ಸಾಗುತ್ತಿರುವ ದಾರಿ, ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು, ದೇಶದ ಆರ್ಥಿಕತೆ ಮತ್ತು ಸಾಗುತ್ತಿರುವ ಮಾರ್ಗ ಹಾಗೂ ಚಳವಳಿಗಳು ಮತ್ತು ಪರ್ಯಾಯ ರಾಜಕಾರಣ ಕುರಿತು ಬಡಗಲಾಪುರ ನಾಗೇಂದ್ರ, ರವಿಕಿರಣ್ ಪುಣಚ, ಶಿವಸುಂದರ್, ಹಾಗೂ ಅಲ್ಲಮಪ್ರಭು ಬೆಟ್ಟದೂರು ವಿಷಯ ಮಂಡಿಸುವರು ಎಂದರು. ಸಂಜೆ ನಡೆಯುವ ಸಮಾರೋಪದಲ್ಲಿ ಸಮಾರೋಪ ಭಾಷಣವನ್ನು ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಮಾಡಲಿದ್ದಾರೆ ಎಂದವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಪ್ರಮುಖರಾದ ಸುರೇಶ್‌ಚಂದ್ರ ರೈ, ವಿವಿಯನ್ ಪಿಂಟೊ, ಆಲ್ವಿನ್ ಮಿನೇಜಸ್ ಇದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts