ಮರೋಡಿ ಗ್ರಾಮದ ನಡ್ತಿಕಲ್ಲು ಸಮೀಪ ಲಾರಿ ಮತ್ತು ಬೈಕ್ ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗ್ರಾಮದ ಪೋಸ್ಟ್‌ಮ್ಯಾನ್ ಬಾಬು ಸಾಲ್ಯಾನ್ (46) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೂಕ್ರಬೆಟ್ಟು ಕಡೆಯಿಂದ ಬಜಿಲಪಾಡೆ ಕಡೆಗೆ ಸಾಗುತ್ತಿದ್ದ ಲಾರಿ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಲಾರಿಯ ಚಕ್ರಕ್ಕೆ ಬಾಬು ಸಾಲ್ಯಾನ್ ಅವರ ದೇಹ ಸಿಲುಕಿ ಛಿದ್ರವಾಗಿ, ಸ್ಥಳದಲ್ಲೇ ಮೃತಪಟ್ಟರು.
ಲಾರಿ ಚಾಲಕ ಪರಾರಿಯಾಗಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ. ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಸಂದೇಶ್ ಸ್ಥಳಕ್ಕೆ ಭೇಟಿ ನೀಡಿದರು. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
| ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಮಾಹಿತಿ ಕಾರ್ಯಕ್ರಮ (more…)