ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಎಜುಕೇಶನ್ (ಎಂಐಟಿಇ), ಇರಾ ವಿದ್ಯಾದೀಪ ಆಂಗ್ಲಮಾಧ್ಯಮ ಶಾಲೆ ವಾರ್ಷಿಕೋತ್ಸವ

ಶ್ರೀ ದೇವಿ ಭಗವತೀ ಎಜುಕೇಶನ್ ಟ್ರಸ್ಟ್‌ನ ಪಂಪ್‌ವೆಲ್ ಹಾಗೂ ಬಿ.ಸಿ ರೋಡ್‌ನಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಎಜುಕೇಶನ್ (ಎಂಐಟಿಇ) ಹಾಗೂ ಇರಾ ವಿದ್ಯಾದೀಪ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಿತು.

ಜಾಹೀರಾತು

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಆಚಾರಪಟ್ಟವರಾದ ರಾಮಚಂದ್ರ ಬಂಗೇರ ಉದ್ಘಾಟಿಸಿದರು.

ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ವೃತ್ತಿ ತರಬೇತಿ ಪಡೆಯುವ ಸಾವಿರಾರು ವಿದ್ಯಾರ್ಥಿಗಳು ಇಂದು ಬೇರೆ ಬೇರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಔದ್ಯಮಿಕ ಕ್ಷೇತ್ರದತ್ತ ಒಲವು ವ್ಯಕ್ತವಾಗುತ್ತಿದೆ. ಅವಕಾಶಗಳನ್ನು ಸದ್ವಿನಿಯೋಗ ಮಾಡುವ ಮೂಲಕ ವಿದ್ಯಾರ್ಥಿಗಳು ಯಶಸ್ವಿ ಸಾಧನೆ ಮಾಡಬೇಕು ಎಂದು ಅವರು ಹೇಳಿದರು.

ಕಳೆದ ಹಲವು ವರ್ಷಗಳಿಂದ ಪಂಪ್‌ವೆಲ್ ಹಾಗೂ ಬಿ.ಸಿ ರೋಡ್‌ನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ ಎಂದು ಶ್ಲಾಘಿಸಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಇರುವ ವಿವಿಧ ಅವಕಾಶಗಳನ್ನು ಪರಿಚಯಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಹೊಸ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ವೃತ್ತಿ ತರಬೇತಿ ಪಡೆಯುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸ್ವಂತ ಪರಿಶ್ರಮದಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದರು.

ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂಐಟಿಇ ವಿದ್ಯಾರ್ಥಿಗಳಾದ ಜಾಹ್ನವಿ ಕೆ ಹಾಗೂ ನಿಕಿತಾ ಅವರನ್ನು ಸಮ್ಮಾನಿಸಲಾಯಿತು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಆರ್.ಕರ್ಕೇರ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ರೈ ಇರಾ, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಎಂಐಟಿಇ ಸಂಸ್ಥೆಯ ನಿರ್ದೇಶಕಿ ನಿಶ್ಮಿತಾ ರಾಕೇಶ್ ಉಪಸ್ಥಿತರಿದ್ದರು.

ವಿದ್ಯಾಸಂಸ್ಥೆಯ ನಿರ್ದೇಶಕ ರಾಕೇಶ್ ಕುಮಾರ್ ಸ್ವಾಗತಿಸಿದರು. ಇರಾ ವಿದ್ಯಾದೀಪ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ ರಾವ್ ಪ್ರಸ್ತಾವಿಸಿದರು. ಎಂಐಟಿಇ ಉಪನ್ಯಾಸಕ ಪ್ರತೀಕ್ ಡಿ.ಶೆಟ್ಟಿ ಬಹುಮಾನ ವಿಜೇತರ ವಿವರ ಓದಿದರು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಎಜುಕೇಶನ್ (ಎಂಐಟಿಇ), ಇರಾ ವಿದ್ಯಾದೀಪ ಆಂಗ್ಲಮಾಧ್ಯಮ ಶಾಲೆ ವಾರ್ಷಿಕೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*