ಶ್ರೀ ದೇವಿ ಭಗವತೀ ಎಜುಕೇಶನ್ ಟ್ರಸ್ಟ್‌ನ ಪಂಪ್‌ವೆಲ್ ಹಾಗೂ ಬಿ.ಸಿ ರೋಡ್‌ನಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಎಜುಕೇಶನ್ (ಎಂಐಟಿಇ) ಹಾಗೂ ಇರಾ ವಿದ್ಯಾದೀಪ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಿತು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಆಚಾರಪಟ್ಟವರಾದ ರಾಮಚಂದ್ರ ಬಂಗೇರ ಉದ್ಘಾಟಿಸಿದರು.
ಕಳೆದ ಹಲವು ವರ್ಷಗಳಿಂದ ಪಂಪ್‌ವೆಲ್ ಹಾಗೂ ಬಿ.ಸಿ ರೋಡ್‌ನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ ಎಂದು ಶ್ಲಾಘಿಸಿದರು.
ಶಾಸಕ ಯು.ಟಿ.ಖಾದರ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಇರುವ ವಿವಿಧ ಅವಕಾಶಗಳನ್ನು ಪರಿಚಯಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಹೊಸ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ವೃತ್ತಿ ತರಬೇತಿ ಪಡೆಯುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸ್ವಂತ ಪರಿಶ್ರಮದಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದರು.
ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂಐಟಿಇ ವಿದ್ಯಾರ್ಥಿಗಳಾದ ಜಾಹ್ನವಿ ಕೆ ಹಾಗೂ ನಿಕಿತಾ ಅವರನ್ನು ಸಮ್ಮಾನಿಸಲಾಯಿತು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಆರ್.ಕರ್ಕೇರ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ರೈ ಇರಾ, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಎಂಐಟಿಇ ಸಂಸ್ಥೆಯ ನಿರ್ದೇಶಕಿ ನಿಶ್ಮಿತಾ ರಾಕೇಶ್ ಉಪಸ್ಥಿತರಿದ್ದರು.
ವಿದ್ಯಾಸಂಸ್ಥೆಯ ನಿರ್ದೇಶಕ ರಾಕೇಶ್ ಕುಮಾರ್ ಸ್ವಾಗತಿಸಿದರು. ಇರಾ ವಿದ್ಯಾದೀಪ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ ರಾವ್ ಪ್ರಸ್ತಾವಿಸಿದರು. ಎಂಐಟಿಇ ಉಪನ್ಯಾಸಕ ಪ್ರತೀಕ್ ಡಿ.ಶೆಟ್ಟಿ ಬಹುಮಾನ ವಿಜೇತರ ವಿವರ ಓದಿದರು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು.