ಬಂಟ್ವಾಳ

ಪಂಜೆ ಭವನ ನಿರ್ಮಾಣ ವೀಕ್ಷಿಸಿದ ಕವಿಯ ಕುಟುಂಬಸ್ಥರು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಂಟ್ವಾಳದಲ್ಲಿ ಪಂಜೆ ಮಂಗೇಶರಾಯ ಸ್ಮಾರಕ ಭವನ ನಿರ್ಮಾಣ ಸಾಗುತ್ತಿದ್ದು, ಇಲ್ಲಿಗೆ ಅವರ ಕುಟುಂಬದವರು ಆಗಮಿಸಿ ಭವನ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಪಂಜೆ ಅವರ ಮನೆಯನ್ನು ಸರಕಾರಿ ಆಸ್ಪತ್ರೆ ವೈದ್ಯರ ವಸತಿಗೃಹವನ್ನಾಗಿಸಲಾಗಿದ್ದು, ಅಲ್ಲೇ ಪಕ್ಕದಲ್ಲಿ ಪಂಜೆ ಸ್ಮಾರಕ ಭವನ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶಾಸಕತ್ವದ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಸುಮಾರು 5 ಕೋಟಿ ರೂ ವೆಚ್ಚದ ಅನುದಾನದಲ್ಲಿ ಪಂಜೆ ಸ್ಮಾರಕ ಭವನ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2017ರ ಅಕ್ಟೋಬರ್ 22ರಂದು ಚಾಲನೆ ನೀಡಿದ್ದರು. ಈ ಸಂದರ್ಭ ರೈ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಪಂಜೆ ಮಂಗೇಶರಾಯರ ಮೊಮ್ಮಗಳಾದ ಉಷಾ ಅರೋರಾ ಮತ್ತು ಅವರ ಪತಿ ಪ್ರಕಾಶ್ ಅರೋರಾ ವೀಕ್ಷಣೆ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉಪಸ್ಥಿತರಿದ್ದು, ಭವನದ ಕುರಿತು ಮಾಹಿತಿ ನೀಡಿದರು.

ಜಾಹೀರಾತು

. ಜಿ‌.ಪಂ.ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ ಅದ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾದ್ಯಕ್ಷರಾದ ಅಬ್ಬಾಸ್ ಆಲಿ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪುರಸಭಾ ಸದ್ಯರಾದ ಜನಾರ್ದನ್ ಚಂಡ್ತಿಮಾರ್, ಮಾಜಿ ಸದಸ್ಯರಾದ ಜಗದೀಶ್ ಕುಂದರ್ ಭಂಡಾರಿಬೆಟ್ಟು, ಎ.ಪಿ.ಎಂ.ಸಿ ಉಪಾದ್ಯಕ್ಷರಾದ ಚಂದ್ರಶೇಖರ್ ಪೂಜಾರಿ, ಡಾ.ವಸಂತ ಬಾಳಿಗ, ಅಮರನಾಥ ಬಾಳಿಗ, ಪ್ರವೀಣ್ ಕಿಣಿ ಇತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts