ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು (55) ಸೋಮವಾರ ಸಂಜೆ ತನ್ನ ಸ್ವಗೃಹದಲ್ಲಿ ನಿಧನರಾದರು.
ಜಾಹೀರಾತು
ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ‘ವಾರ್ತಾಭಾರತಿ’ ದೈನಿಕದಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ವಾರದ ಹಿಂದೆ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಸದಿಗಂತ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು.
ಉತ್ತಮ ಸ್ಯಾಕ್ಸೋಫೋನ್ ವಾದಕರಾಗಿದ್ದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ, ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ಸೇರಿದಂತೆ , ಜಿಲ್ಲೆ ಹಾಗೂ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳಲ್ಲಿ ತನ್ನ ಕಲಾ ನೈಪುಣ್ಯತೆಯನ್ನು ಪ್ರದರ್ಶಿಸಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು ನಿಧನ"
Be the first to comment on "ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು ನಿಧನ"