ವಿಶ್ವಹಿಂದು ಪರಿಷತ್ – ಬಜರಂಗದಳ ವಿಟ್ಲ ಪ್ರಖಂಡ ಮತ್ತು ವಿರಾಟ್ ಹಿಂದು ಸಮಾಜೋತ್ಸವ ಸಮಿತಿ ವತಿಯಿಂದ ಮಾ.15ರಂದು ವಿಟ್ಲ ರಥದ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿರಾಟ್ ಹಿಂದು ಸಮಾಜೋತ್ಸವವನ್ನು ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಮುಂದೂಡಲಾಗುತ್ತಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಹೇಳಿದರು.
ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾಜೋತ್ಸವಕ್ಕೆ ಅಭೂತಪೂರ್ವವಾದ ತಯಾರಿಗಳು ನಡೆದು, ೨೫ ಸಾವಿರಕ್ಕಿಂತ ಹೆಚ್ಚು ಜನ ಸೇರುವ ವ್ಯವಸ್ಥೆಗಳು ನಿರ್ಮಾಣವಾಗಿತ್ತು. ಸಂಸದರಾದ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್, ಬಜರಂಗದಳ ರಾಷ್ಟ್ರೀಯ ಸಂಯೋಜಕ ಸೋಹನ್ ಸಿಂಗ್ ಸೋಲಂಕಿ ಅವರು ಮಂಗಳೂರು ಹಾಗೂ ಪುತ್ತೂರು ಪರಿಸರಕ್ಕೆ ಈಗಾಗಲೇ ಆಗಮಿಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದಾಗ ಮತ್ತು ಹೊರಗಿನಿಂದ ಜನರು ಬಂದು ಸಮಸ್ಯೆಗಳಾಗಬಾರದು ಎಂದು ಅನಿವಾರ್ಯವಾಗಿ ಕಾರ್ಯಕ್ರಮವನ್ನು ಮುಂದೂಡಲಾಗುತ್ತಿದೆ ಎಂದರು.ಸಮಿತಿ ಅಧ್ಯಕ್ಷ ಹರೀಶ್ ನಾಯಕ್ ವಿಟ್ಲ, ಕಾರ್ಯಾಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿಗಳಾದ ಪದ್ಮನಾಭ ಕಟ್ಟೆ ವಿಟ್ಲ, ಅಕ್ಷಯ್ ಆರ್ಯನ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.