ಬಂಟ್ವಾಳನ್ಯೂಸ್ – ಸಂಪಾದಕ: ಹರೀಶ ಮಾಂಬಾಡಿ . ಸುದ್ದಿ ಜಾಹೀರಾತುಗಳಿಗೆ 9448548127 ಸಂಪರ್ಕಿಸಿ
ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಮುಂದಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.
ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಅವರು ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಬಾಬು ಪೂಜಾರಿ ಕೌಡಾಡಿಗುತ್ತು, ಭೊಜರಾಜ ಶೆಟ್ಟಿ ಕೊರಗಟ್ಟೆ, ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ವ್ಯವಸ್ಥಾಪನ ಸಮಿತಿ,ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ವಿವಿಧ ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.