ವಿಟ್ಲ

ಹಿಂದುತ್ವದ ಕಾರ್ಯಕ್ಕೆ ಸದಾ ಬದ್ಧ – ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್

  • ತುಳಸಿ, ಗೋವು, ಗಂಗಾಜಲದಿಂದ ರೋಗಭೀತಿ ದೂರ

ಹಿಂದುತ್ವದ ಕಾರ್ಯಕ್ಕೆಅವರತು ಸದಾ ಬದ್ಧ ಎಂದು ಸಂಸದೆ, ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

ಜಾಹೀರಾತು

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಕಾರ ಸೂಚನೆಯನ್ವಯ ವಿಟ್ಲದಲ್ಲಿ ಮಾ.15ರಂದು ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವ ಮುಂದೂಡಲಾಗಿದ್ದು ಈ ಹಿನ್ನೆಲೆಯಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಭಾನುವಾರ ವಿಟ್ಲಕ್ಕೆ ಆಗಮಿಸಿ, ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಂ.ಹರೀಶ್ ನಾಯಕ್ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಟ್ಲ ಪಂಚಲಿಂಗೇಶ್ವರನ ಸನ್ನಿಧಿಗೆ ಸಾಧ್ವಿ ಪ್ರಜ್ಞಾ ಸಿಂಗ್ ಭೇಟಿ ನೀಡಿದರು.

ಸಾಂಕ್ರಾಮಿಕ ರೋಗಕ್ಕೆ ಭಯಭೀತರಾಗುವ ಆವಶ್ಯಕತೆಯಿಲ್ಲ. ಬದಲಾಗಿ ಸಾವಧಾನವಾಗಿರಬೇಕು. ರೋಗ ತಡೆಗಟ್ಟುವ ಸಲುವಾಗಿ, ಇಂದಿನ ಕಾರ್ಯಕ್ರಮ ಮುಂದೂಡಲಾಗಿದೆ. ಮತ್ತೆ ಇದು ವಿರಾಟ್ ಸ್ವರೂಪದಲ್ಲಿಯೇ ನಡೆಯಲಿದೆ ಎಂದು ಹೇಳಿದ ಅವರು, ನಮ್ಮ ದೇಶದಲ್ಲಿ ತುಳಸಿಯಿದೆ, ಗೋವಿದೆ, ಗಂಗಾಜಲವಿದೆ. ಇದು ನಮ್ಮನ್ನು ರೋಗರಹಿತರನ್ನಾಗಿಸುತ್ತವೆ. ಕೊರೊನಾದಂಥ ರೋಗಗಳೂ ಬಾಧಿಸದು,ಕೊರೊನಾ ರೋಗದಿಂದ ಮೃತಪಟ್ಟವರ ಆತ್ಮಸದ್ಗತಿಗಾಗಿ ಮತ್ತು ಅವರ ಕುಟುಂಬಕ್ಕೆ ದುಃಖ, ಕಷ್ಟ ಸಹಿಸುವ ಶಕ್ತಿ ಕೊಡಲಿ. ಈ ದುಃಖ, ಕಷ್ಟ ಇನ್ನಾರಿಗೂ ಬರದೇ ಇರಲಿ. ಇನ್ನಾವ ಜೀವವೂ ಕೊರೊನಾ ರೋಗಕ್ಕೆ ಬಲಿಯಾಗದಿರಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ವಿಟ್ಲ ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಂ.ಹರೀಶ್ ನಾಯಕ್ ವಿಟ್ಲ, ಕಾರ್ಯಾಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಟ್ಟೆ ವಿಟ್ಲ, ಅಕ್ಷಯ್ ಆರ್ಯನ್ ರಾಥೋಡ್, ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್, ಕಾರ್ಯದರ್ಶಿ ನರಸಿಂಹ ಶೆಟ್ಟಿ ಮಾಣಿ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅವರನ್ನು ವೀಕ್ಷಿಸಲು ಬಂದಿದ್ದ ಅನೇಕ ಹಿಂದೂ ಬಾಂಧವರೊಡನೆ ಮಾತುಕತೆ ನಡೆಸಿ, ಅವರು ತೆರಳಿದರು

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.