ಬಂಟ್ವಾಳ ತಾಲೂಕಿನ ರಾಯಿಯಲ್ಲಿ ರೈತರ ಚಿಂತನಾ ಸಭೆ ರಮೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ಭಾಗವಹಿಸಿದ್ದರು.
ಬಂಟ್ವಾಳ ತಾಲೂಕು ಸಂಘಟನಾ ಕಾರ್ಯದರ್ಶಿ ಸದಾನಂದ ಶೀತಲ್ ಸ್ವಾಗತಿಸಿ ಸಭೆಯನ್ನು ನಿರ್ವಹಿಸಿದರು. ರಾಯಿ, ಕುಕ್ಕಿಬೆಟ್ಟು, ಸಂಗಬೆಟ್ಟು ಹಾಗೂ ಕೊಯಿಲ ಗ್ರಾಮಗಳು ಸೇರಿದಂತೆ ವಲಯ ಘಟಕದ ರಚಿಸಲು 10 ರೈತರ ಸಂಯೋಜಕರ ಸಮಿತಿ ರಚಿಸಲಾಯಿತು. ಪ್ರಧಾನ ಸಂಯೋಜಕರಾಗಿ ರಮೇಶ್ ನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ಎಪ್ರಿಲ್ ತಿಂಗಳಲ್ಲಿ ವಲಯ ಘಟಕದ ರಚನಾ ಸಭೆ ನಡೆಸಲು ನಿರ್ಣಯಿಸಲಾಯಿತು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127