ಬಂಟ್ವಾಳ

ಪ.ಜಾತಿ, ಪಂಗಡ ಕಾಲೊನಿ: ಕೊರೊನಾ ಹರಡದಂತೆ ನಿಗಾ ವಹಿಸಿ

ಪರಿಶಿಷ್ಟ ಜಾತಿ, ಪಂಗಡ ಕಾಲೊನಿಗಳಲ್ಲಿ ಕೊರೊನಾ ಹರಡದಂತೆ ಮುಂಜಾಗರೂಕತೆ ವಹಿಸಿ, ಕೇರಳಕ್ಕೆ ಬಂಟ್ವಾಳ ಸನಿಹವಿರುವ ಕಾರಣ ಆಶಾ ಕಾರ್ಯಕರ್ತೆಯರ ಸಹಿತ ಇಲಾಖೆಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ತಿಳಿಸಿದ್ದಾರೆ.

ಜಾಹೀರಾತು

ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಡಿಯಲ್ಲಿ ತಾಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿರುವ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಈ ಸಂದರ್ಭ ಮಾತನಾಡಿದ ಅವರು, ಕೊರೊನಾ ವೈರಸ್ ಮುನ್ನೆಚ್ಚರಿಕೆಯಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲನಿಗಳು ಸೇರಿದಂತೆ ಎಲ್ಲಾ ರೀತಿಯ ಕಾಲನಿಗಳ ಮೇಲೆ ಹೆಚ್ಚಿನ ನಿಗಾ ಇರಿಸಿ, ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಬಂಟ್ವಾಳ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಇಒ ಸೂಚಿಸಿದರು.

ಜಾಹೀರಾತು

ಪ್ರತಿ ಇಲಾಖೆಯಲ್ಲಿ ಕೊರೊನಾ ವೈರಸ್ ಕುರಿತು ಪ್ರತಿ ಇಲಾಖೆಯಲ್ಲಿ ಜಾಗೃತಿ ಪತ್ರಗಳನ್ನು ಅಳವಡಿಸಬೇಕು. ಜತೆಗೆ ತಮ್ಮ ಸಿಬಂದಿಗಳಲ್ಲೂ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ತಾಲೂಕಿನ ಗಡಿ ಪ್ರದೇಶವು ಕೇರಳ ರಾಜ್ಯದೊಂದಿಗೆ ಹಂಚಿಕೊಂಡಿರುವ ಗಡಿ ಪ್ರದೇಶದಲ್ಲಿ ಹೊರಭಾಗದಿಂದ ಆಗಮಿಸುವವರ ಕುರಿತು ನಿಗಾ ಇಟ್ಟು, ಯಾವುದೇ ಮಾಹಿತಿ ಲಭ್ಯವಾದರೆ ತಮ್ಮ ಅಥವಾ ಸಂಬಂಧಪಟ್ಟವರ ಗಮನಕ್ಕೆ ತರುವಂತೆ ತಹಶೀಲ್ದಾರ್ ರಶ್ಮಿ ಎಸ್.ಆರ್.ಮಾಹಿತಿ ನೀಡಿದರು.ಸಭೆಯಲ್ಲಿ ಎಸ್‌ಟಿ/ಎಸ್‌ಟಿಗಳಿಗೆ ಮೀಸಲಿಟ್ಟ ಪ್ರತಿ ಇಲಾಖೆಗಳ ಅನುದಾನಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ