ಕೊರೊನಾ – ಜಿಲ್ಲಾಡಳಿತ ಸೂಚಿಸಿದೆ ಹಲವು ನಿರ್ಬಂಧ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಅವರು ಕೆಲವು ಸೂಚನೆ, ನಿರ್ಬಂಧಗಳನ್ನು ಮಂಗಳವಾರ ವಿಧಿಸಿದ್ದಾರೆ. ಇಲ್ಲಿದೆ ವಿವರ

ಜಾಹೀರಾತು

ಮಂಗಳೂರು: ಕೋವಿಡ್ – 19 (ಕೋರೊನಾ ವೈರಾಣು ಕಾಯಿಲೆ 2019)ಯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಜಾತ್ರೆ, ಉತ್ಸವ, ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ ಸೋಂಕು ಹರಡುವ ಸಾಧ್ಯತೆಯಿರುವ ಕಾರಣದಿಂದ ಸರ್ಕಾರದ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಯಿಂದ ಜಿಲ್ಲೆಯಾದ್ಯಂತ ಮಾರ್ಚ್ 17 ರಿಂದ ಮುಂದಿನ ಆದೇಶ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ  ಸಿಂಧೂ ಬಿ. ರೂಪೇಶ್ ಅವರು ಸಿ.ಆರ್.ಪಿ.ಸಿ ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶಿಸಿದ್ದಾರೆ.

  • ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳಲ್ಲಿ ಕೇವಲ ದೇವಸ್ಥಾನಗಳ ಸಿಬ್ಬಂದಿ ಮಾತ್ರ ಭಾಗವಹಿಸುವಂತೆ ಸೂಚಿಸಲಾಗಿದೆ. ಉತ್ಸವಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
  • ದೇವಸ್ಥಾನಗಳಲ್ಲಿ ಕೇವಲ ದೇವರ ದರ್ಶನವನ್ನು ಹೊರೆತು ಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದೆ ಹಾಗೂ ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ,
  • ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಲಾಗಿದೆ,
  • ಬೇಸಿಗೆ ಶಿಬಿರ ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದಂತೆ ಆದೇಶಿಸಲಾಗಿದೆ,
  • ಬೀಚ್‍ಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದುವೆ ಸಮಾರಂಭಗಳನ್ನು ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಯೋಜಿಸಲು ಸೂಚಿಸಲಾಗಿದೆ.

ಪಿ.ಜಿ. ಮತ್ತು ವಸತಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳು ಹೀಗಿವೆ:

ಪಿ.ಜಿ. ಮತ್ತು ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಮ್ಮ ಶಿಕ್ಷಣ ಸಂಸ್ಥೆಗಳು ಕೋವಿಡ್-19 ರ ಹಿನ್ನೆಲೆಯಲ್ಲಿ ರಜೆ ಘೋಷಿಸಿದ್ದಲ್ಲಿ ತಮ್ಮ ತಮ್ಮ ಮನೆಗಳಿಗೆ ವಾಪಾಸು ಹೋಗಲು ಸಲಹೆ ನೀಡಬೇಕು. ಒಂದು ವೇಳೆ ಯಾರಾದರೂ ಪಿ.ಜಿ. ಮತ್ತು ವಸತಿ ನಿಲಯಗಳಲ್ಲಿ ಉಳಿದುಕೊಳ್ಳಲು ಬಯಸಿದ್ದಲ್ಲಿ ಅಂತಹವರಿಗೆ ಪಿಜಿ ಹಾಗೂ ವಸತಿ ನಿಲಯಗಳು ಮಾಲಿಕರು/ವ್ಯವಸ್ಥಾಪಕರು ಕರ್ನಾಟಕ ಸರಕಾರವು ನೀಡುರುವ ಸಲಹೆಗಳಂತೆ ವೈಯಕ್ತಿಕ ಸ್ವಚ್ಚತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ನಿಯತಕಾಲಿಕವಾಗಿ ಪಿ.ಜಿ. ವಸತಿ ನಿಲಯಗಳಲ್ಲಿ ವಾಸಿಸುವವರಿಗೆ ಅನಾನುಕೂಲವಾಗದಂತೆ ಹಾಗೂ ಯಾವುದೇ ಸೋಂಕು ಹರಡದಂತೆ ಕೋಣೆಗಳಲ್ಲಿ ಜನದಟ್ಟಣೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಜಾಹೀರಾತು

ಪಿ.ಜಿ./ವಸತಿ ನಿಲಯಗಳ ಆವರಣಗಳಲ್ಲಿ ನೈರ್ಮಲ್ಯತೆ ಹಾಗೂ ಸ್ವಚ್ಚತೆ ಕಾಪಾಡಲು ನೀಡಲಾದ ನಿರ್ದೇಶನಗಳನ್ನು ಅನುಸರಿಸದೇ ಕೋವಿಡ್ – 19 ಹರಡಲು ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮಗಳನ್ನು ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕೊರೊನಾ – ಜಿಲ್ಲಾಡಳಿತ ಸೂಚಿಸಿದೆ ಹಲವು ನಿರ್ಬಂಧ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*