ಕಂಚಿನಡ್ಕಪದವು ಎಂಬಲ್ಲಿ ಬಂಟ್ವಾಳ ಪುರಸಭೆ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಿತ ಸ್ಥಳಿಯ ಶಾಸಕರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪುರಸಭೆಯ ಮುಖ್ಯಾಧಿಕಾರಿಗಳ ಸಭೆಯನ್ನ ಕರೆಯಲು ಮಂಗಳವಾರ ಸಜಿಪನಡು ಗ್ರಾಪಂ ಕಚೇರಿಯಲ್ಲಿ ನಡೆದ ಸರ್ವಪಕ್ಷಗಳ ಸಭೆ ತೀರ್ಮಾನಿಸಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ನಾಸೀರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾದ ಸುನೀತಾ ಶಾಂತಿ ಮೊರಾಸ್, ಷಣ್ಮುಖ ಸುಬ್ರಹ್ಮಣ್ಯ ದೇವಾಸ್ಥನದ ಆಡಳಿತ ಮುಖ್ಯಸ್ಥರಾದ ವೆಂಕಟೇಶ್ವರ ಭಟ್ ಮುಳ್ಳಿಂಜ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ ದೇರಾಜೆ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಅಬೂಬಕ್ಕರ್, ಎಸ್.ಡಿ.ಪಿ.ಐ ಗ್ರಾಮ ಸಮಿತಿ ಅಧ್ಯಕ್ಷರಾದ ನವಾಝ್, ಹಾಗೂ ವಿವಿಧ ಪಕ್ಷದ ಮುಖಂಡರು, ಗ್ರಾಪಂ ಸದಸ್ಯರು ಭಾಗವಹಿಸಿದ್ದರು.ಈ ವೇಳೆ ಕಂಚಿನಡ್ಕಪದವಿನಲ್ಲಿ ತ್ಯಾಜ್ಯ ವಿಲೇವಾರಿ ಬಗ್ಗೆ ಇತ್ತೀಚೆಗೆ ಆಗಿರುವ ಬೆಳವಣಿಗೆಯನ್ನು ಸಭೆಯಲ್ಲಿ ಖಂಡಿಸಲಾಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…