ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಕೊಂಬು ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮುಂಭಾಗದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಕಚೇರಿಯಲ್ಲಿದ್ದ ಕಪಾಟಿನ ಬಾಗಿಲನ್ನು ಮುರಿದು ಅದರಲ್ಲಿದ್ದ ಪುಸ್ತಕವನ್ನೆಲ್ಲಾ ಕೊಠಡಿಯಲ್ಲಿ ಚೆಲ್ಲಾಪಿಲ್ಲಿ ಮಾಡಿ ನಗದು ಹಣಕ್ಕಾಗಿ ಶೋಧಿಸಿದ್ದಾರೆ.
ಆದರೆ ಯಾವುದೇ ನಗದು ಪತ್ತೆಯಾಗದಿರುವುದರಿಂದ ಪುಸ್ತಕವನ್ನು ಹಾಗೆ ಬಿಟ್ಟು ತೆರಳಿದ್ದಾರೆ. ಪಕ್ಕದ ವಿವೇಕ ಜಾಗೃತ ಬಳಗದ ಕಚೇರಿಯ ಬಾಗಿಲನ್ನು ಮುರಿದು ಒಳ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಾಣಿಕೆ ಡಬ್ಬಿಯನ್ನು ಹೊತ್ತೊಯ್ದಿದಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಂಭೂರು ದ.ಕ.ಜಿ.ಪ.ಹಿ.ಪ್ರಾ.ಶಾಲೆಯ ಮುಂಬಾಗಿಲನ್ನು ಮುರಿದು ಕಳವಿಗೆ ವಿಫಲ ಯತ್ನ ನಡೆಸಿದ್ದಾರೆ. ಪಕ್ಕದ ಅಂಗನವಾಡಿ ಹಾಗೂ ಶ್ರೀರಾಮ ಭಜನಾ ಮಂದಿರದಲ್ಲೂ ಕಳ್ಳರು ಬಾಗಿಲು ಮುರಿದು ಕಳವಿಗೆ ವಿಫಲ ಯತ್ನ ನಡೆಸಿ ಬರಿಗೈಯಲ್ಲಿ ಪರಾರಿಯಾಗಿದ್ದಾರೆ.
ಸುದ್ದಿ ತಿಳಿದ ನಗರ ಠಾಣೆಯ ಎಸ್ ಐ ಅವಿನಾಶ್ ಹಾಗೂ ಗ್ರಾಮಾಂತರ ಠಾಣೆಯೆ ಎಸ್ ಐ ಪ್ರಸನ್ನ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಶಿಕ್ಷಣಾಧಿಕಾರಿ ಜ್ಙಾನೇಶ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.