ಬಂಟ್ವಾಳ

ಶಾಲೆ, ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಕೊಂಬು ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮುಂಭಾಗದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಕಚೇರಿಯಲ್ಲಿದ್ದ ಕಪಾಟಿನ ಬಾಗಿಲನ್ನು ಮುರಿದು ಅದರಲ್ಲಿದ್ದ ಪುಸ್ತಕವನ್ನೆಲ್ಲಾ ಕೊಠಡಿಯಲ್ಲಿ ಚೆಲ್ಲಾಪಿಲ್ಲಿ ಮಾಡಿ ನಗದು ಹಣಕ್ಕಾಗಿ ಶೋಧಿಸಿದ್ದಾರೆ.

ಜಾಹೀರಾತು

ಜಾಹೀರಾತು

ಆದರೆ ಯಾವುದೇ ನಗದು ಪತ್ತೆಯಾಗದಿರುವುದರಿಂದ ಪುಸ್ತಕವನ್ನು ಹಾಗೆ ಬಿಟ್ಟು ತೆರಳಿದ್ದಾರೆ. ಪಕ್ಕದ ವಿವೇಕ ಜಾಗೃತ ಬಳಗದ ಕಚೇರಿಯ ಬಾಗಿಲನ್ನು ಮುರಿದು ಒಳ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಾಣಿಕೆ ಡಬ್ಬಿಯನ್ನು ಹೊತ್ತೊಯ್ದಿದಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಂಭೂರು ದ.ಕ.ಜಿ.ಪ.ಹಿ.ಪ್ರಾ.ಶಾಲೆಯ ಮುಂಬಾಗಿಲನ್ನು ಮುರಿದು ಕಳವಿಗೆ ವಿಫಲ ಯತ್ನ ನಡೆಸಿದ್ದಾರೆ. ಪಕ್ಕದ ಅಂಗನವಾಡಿ ಹಾಗೂ ಶ್ರೀರಾಮ ಭಜನಾ ಮಂದಿರದಲ್ಲೂ ಕಳ್ಳರು ಬಾಗಿಲು ಮುರಿದು ಕಳವಿಗೆ ವಿಫಲ ಯತ್ನ ನಡೆಸಿ ಬರಿಗೈಯಲ್ಲಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ನಗರ ಠಾಣೆಯ ಎಸ್ ಐ ಅವಿನಾಶ್ ಹಾಗೂ ಗ್ರಾಮಾಂತರ ಠಾಣೆಯೆ ಎಸ್ ಐ ಪ್ರಸನ್ನ ಅವರು‌ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಶಿಕ್ಷಣಾಧಿಕಾರಿ ಜ್ಙಾನೇಶ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.  ಈ ಎಲ್ಲಾ ಪ್ರಕರಣಗಳ ಬಗ್ಗೆ ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ