ಬಂಟ್ವಾಳ

ಹಸಿಕಸ, ಒಣಕಸ ಬೇರ್ಪಡಿಸಿ ನೀಡಿ: ಸಾರ್ವಜನಿಕರಿಗೆ ಪುರಸಭೆ ಸೂಚನೆ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಎಲ್ಲ ನಾಗರಿಕರು ಕಸವನ್ನು ತ್ಯಾಜ್ಯ ಸಂಗ್ರಹದ ವಾಹನಕ್ಕೆ ನೀಡುವಾಗಲೇ ಹಸಿಕಸ, ಒಣಕಸ ಬೇರ್ಪಡಿಸಿ ನೀಡಬೇಕು ಇದನ್ನು ಪಾಲಿಸದೇ ಇದ್ದರೆ, ನಿಯಮ ಪ್ರಕಾರ ದಂಡ ವಿಧಿಸಲಾಗುವುದು ಎಂದು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ತಿಳಿಸಿದ್ದಾರೆ.

ಜಾಹೀರಾತು

ಶನಿವಾರ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿರುವ ಅವರು, ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಮಂಗಳೂರು ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ರವರ ಸಮಕ್ಷಮದಲ್ಲಿ ನಡೆದ ಸಭೆಯಲ್ಲಿ ಬಂಟ್ವಾಳ ಸಜಿಪನಡು ಕಂಚಿನಡ್ಕಪದವು ತ್ಯಾಜ್ಯ ಸಂಸ್ಕರಣಾ ಘಟಕದ ನಿವೇಶನದಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಂಗ್ರಹಿಸಲಾದ ಒಣಕಸಗಳನ್ನು ಹಾಕಲು ತೀರ್ಮಾನ ಕೈಗೊಳ್ಳಲಾಗಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮನೆ ಮನೆ ಕಸಗಳನ್ನು ಮೂಲದಿಂದಲೇ ಮನೆಯವರು ಹಸಿಕಸ ಮತ್ತು ಒಣಕಸಗಳನ್ನು ಬೇರ್ಪಡಿಸಿ ಪುರಸಭೆಯ ವಾಹನಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ಸೂಚಿಸಿದ್ದು, ಈ ಕುರಿತುಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದರಿಂದ ಮಾ.೨೩ರಿಂದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಲ್ಲಾ ಮನೆಯವರು ಕಸಗಳನ್ನು ಹಸಿಕಸ ಮತ್ತು ಒಣಕಸಗಳನ್ನು ಬೇರೆ ಬೇರೆ ಮಾಡಿ ಬೇರ್ಪಡಿಸಿ ಪುರಸಭೆ ವಾಹನಕ್ಕೆ ನೀಡಬೇಕಾಗಿ ತಿಳಿಸಿದ್ದಾರೆ.

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.