ಕೋವಿಡ್ -19 ವಿರುದ್ಧ ಜಾಗೃತಿ, ಜನತಾ ಕರ್ಫ್ಯೂಗೆ ಬಂಟ್ವಾಳ ಸ್ತಬ್ದ

ಜಾಹೀರಾತು

www.bantwalnews.com Editor: Harish Mambady 

Photos and video: Sadashiva Kaikamba ಚಿತ್ರ, ವಿಡಿಯೊ ಕೃಪೆ: ಸದಾಶಿವ ಕೈಕಂಬ, ಬಿ.ಸಿ.ರೋಡ್

ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮುಂಜಾಗರೂಕತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ‘ಜನತಾ ಕರ್ಫ್ಯೂ’ ಗೆ ಬಂಟ್ವಾಳ ತಾಲೂಕು ಸೇರಿದಂತೆ ರಾಜ್ಯಾದ್ಯಂತ ಜನರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ..

ಎಲ್ಲಾ ರೀತಿಯ ಸಂಸ್ಥೆಗಳು ಹಾಗೂ ಸಂಘಟನೆಗಳು ಈ ಆಂದೋಲನಕ್ಕೆ ಸ್ವಯಂಪ್ರೇರಿತವಾಗಿ ಬೆಂಬಲ ವ್ಯಕ್ತಪಡಿಸಿದ್ದು,  ಇಡೀ ರಾಜ್ಯವೇ ಸ್ತಬ್ಧಗೊಂಡಿದೆ. ಭಾನುವಾರ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ಕಚೇರಿಗಳೂ ಕೂಡ ಕಾರ್ಯನಿರ್ವಹಿಸುತ್ತಿಲ್ಲ. ಬಹುತೇಕ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲವೂ ಬಂದ್. ಖಾಸಗಿ ಆಸ್ಪತ್ರೆಗಳ ತುರ್ತು ಸೇವೆ ಲಭ್ಯ ಹಾಗೂ ಸರಕಾರಿ ಆಸ್ಪತ್ರೆಗಳೂ ಸೇವೆಗೆ ಲಭ್ಯವಿದೆ.

ಕೆಎಸ್ಆರ್’ಟಿಸಿ ಸಂಚಾರ ಸಂಪೂರ್ಣವಾಗಿ ಬಂದ್ ಆಗಿವೆ. ಖಾಸಗಿ ಬಸ್ಸು,ಆಟೋ, ಟ್ಯಾಕ್ಸಿಗಳೂ ರಸ್ತೆಗಿಳಿಯಲಿಲ್ಲ. ಅಗತ್ಯ ಸೇವೆಗಳನ್ನು ಹೊರತುಪಡಿಸಿದರೆ, ಬೇರೆಲ್ಲಾ ರೀತಿಯ ಸೇವೆಗಳೂ ಸಂಪೂರ್ಣ ಬಂದ್ ಆಗಿವೆ.  ಬೀದಿ ಬದಿ ವ್ಯಾಪಾರಿಗಳು ಭಾನುವಾರ ವ್ಯಾಪಾರ, ವಹಿವಾಟು ನಡೆಸಲಿಲ್ಲ. ಬಿ.ಸಿ.ರೋಡಿನ ಬಸ್ ನಿಲ್ದಾಣ, ಕೈಕಂಬ, ಬಂಟ್ವಾಳ, ಕಲ್ಲಡ್ಕ, ಮಾಣಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಸಂಪೂರ್ಣ ಬಂದ್ ಕಂಡುಬಂತು. ಬೆಳಗ್ಗೆಯೇ ಹಾಲು, ಪತ್ರಿಕಾ ವಿತರಕರು ಸುಮಾರು ಆರು ಗಂಟೆ ಒಳಗೇ ಕರ್ತವ್ಯ ಮುಗಿಸಿದ್ದು, ಬಂದ್ ಗೆ ಬೆಂಬಲ ಸೂಚಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
ಜಾಹೀರಾತು
ಜಾಹೀರಾತು

Be the first to comment on "ಕೋವಿಡ್ -19 ವಿರುದ್ಧ ಜಾಗೃತಿ, ಜನತಾ ಕರ್ಫ್ಯೂಗೆ ಬಂಟ್ವಾಳ ಸ್ತಬ್ದ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*