ಜಿಲ್ಲಾ ಸುದ್ದಿ

ಕೋವಿಡ್ -19 ವಿರುದ್ಧ ಸಮರ: ದ.ಕ.ದಲ್ಲಿ ನಿಷೇಧಾಜ್ಞೆ ಕಟ್ಟುನಿಟ್ಟು, ಹೊಸ ನಿರ್ಬಂಧ ಜಾರಿ

  • ಸಾರ್ವಜನಿಕರು ಮುಕ್ತವಾಗಿ ಬೆರೆಯುವುದಕ್ಕೆ ತಡೆ, ಏನೇನಿದೆ ಸೂಚನೆ ಇಲ್ಲಿದೆ ನೋಡಿ..

ದ.ಕ. ಜಿಲ್ಲೆಯ ನೆರೆಯ ರಾಜ್ಯ, ಜಿಲ್ಲೆಗಳಲ್ಲಿ ಕೋವಿಡ್ 19 (ಕೊರೊನಾ ವೈರಾಣು ಕಾಯಿಲೆ 2019)ಯ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನೆರೆ ರಾಜ್ಯ/ಜಿಲ್ಲೆಗಳಿಂದ ದ.ಕ.ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದ ವ್ಯಕ್ತಿಯಿಂದ ವ್ಯಕ್ತಿಗೆ ಈ ಸಾಂಕ್ರಾಮಿಕ ರೋಗವು ಹರಡುವ ಸಾಧ್ಯತೆ ಇದೆ. ದ.ಕ.ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ಸೋಮವಾರ ರಾತ್ರಿ ಹೊರಡಿಸಿದ ತುರ್ತು ಪ್ರಕಟಣೆಯಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ಬೆರೆಯುವುದನ್ನು ಅನಿವಾರ್ಯವಾಗಿ ತಡೆಯಬೇಕಾದ ಅವಶ್ಯಕತೆ ಇದೆ ಎಂದು ಹೇಳಿರುವ ಅವರು, 22ರ ರಾತ್ರಿ 9ರಿಂದ ಹೊರಡಿಸಿದ ನಿಷೇಧಾಜ್ಞೆಗೆ ಹೆಚ್ಚುವರಿ ನಿರ್ಬಂಧಗಳನ್ನು ಜಾರಿಗೊಳಿಸಿದ್ದಾರೆ.

ಜಾಹೀರಾತು

ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಹೆಚ್ಚುವರಿ ನಿರ್ಬಂಧಗಳು ಹೀಗಿದೆ:

  1. ಅವಶ್ಯಕ ಸೇವೆಗಳಾದ ಆಹಾರ, ಪಡಿತರ ಅಂಗಡಿ, ಹಾಲು, ತರಕಾರಿ, ದಿನಸಿ, ಮಾಂಸ, ಮೀನು, ಹಣ್ಣಿನ ಮಾರುಕಟ್ಟೆ, ಸಗಟು ಮತ್ತು ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ಮಾತ್ರ ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ತೆರೆಯಲು ಅವಕಾಶ ಇರುತ್ತದೆ.
  2. ಎಲ್ಲ ಕ್ಯಾಬ್ ಗಳು, ಆಟೊ ರಿಕ್ಷಾಗಳು, ಬಾಡಿಗೆ ವಾಹನ ಸೇವೆಗಳನ್ನು ಪ್ರಯಾಣಿಕರ ಸೇವೆಗೆ ಬಳಸತಕ್ಕದ್ದಲ್ಲ. ಕೇವಲ ತುರ್ತು ಪರಿಸ್ಥಿತಿ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ಬಳಸಲು ಅವಕಾಶ ನೀಡಲಾಗಿದೆ.
  3. ಅವಶ್ಯಕ ಸೇವೆಗಳು ಮತ್ತು ವಸ್ತುಗಳು, ಆಹಾರ, ವೈದ್ಯಕೀಯ ಉಪಕರಣಗಳು, ಔಷಧ, ಇಂಧನ, ಕೃಷಿಯುತ್ಪನ್ನಗಳ ಕಾರ್ಖಾನೆಗಳನ್ನು ಹೊರತುಪಡಿಸಿ, ಉಳಿದ ಕೈಗಾರಿಕೆ/ಕಾರ್ಖಾನೆಗಳ ಕಾರ್ಯಾಚರಣೆ ಸ್ಥಗಿತಗೊಳಿಸತಕ್ಕದ್ದು.

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts