ಮಂಗಳೂರಲ್ಲಿ ಮತ್ತೆ ನಾಲ್ಕು COVID ಪ್ರಕರಣಗಳು ದೃಢಪಟ್ಟಿದ್ದು, ಇವರೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ದಕ ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣಗಳು ಒಟ್ಟು 5 ಆಗಿವೆ.
ಪ್ರಯಾಣಿಕರು ಕಡ್ಡಾಯ 14 ದಿನ ಗೃಹ ನಿಗಾವಣೆಯಲ್ಲಿರತಕ್ಕದ್ದು. ತಮ್ಮ ಮನೆಯವರೊಂದಿಗೂ ಬೆರೆಯತಕ್ಕದ್ದಲ್ಲ. ಮಕ್ಕಳು ವೃದ್ಧರಿದ್ದರೆ ಅವರಿಂದ ದೂರವಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ನಿಗಾವಣೆಯಲ್ಲಿರುವವರು ರೋಗಲಕ್ಷಣ ಕಂಡುಬಂದರೆ ತಾಲೂಕು ಆರೋಗ್ಯಾಧಿಕಾರಿ/ತಾಲೂಕು ತಹಸೀಲ್ದಾರ್ ಸಂಪರ್ಕಿಸಬಹುದು. ವಿಪತ್ತು ಘಟಕ ಕಂಟ್ರೋಲ್ ರೂಮ್ 1077 ಕ್ಕೆ ಕರೆ ಮಾಡಬಹುದು. ಯಾವುದೇ ಕಾರಣಕ್ಕೂ ನೇರವಾಗಿ ವೈದ್ಯರ ಬಳಿಗೆ ಹೋಗಬಾರದು ಎಂದು ತಿಳಿಸಿದ್ದಾರೆ.
ಕೋವಿಡ್ ಪ್ರಕರಣದ ಕುರಿತು ಆಪ್ ಅನ್ನು ಜಿಲ್ಲಾಡಳಿತ ಸಿದ್ಧಪಡಿಸಿದೆ. ಅದರ ಲಿಂಕ್ ಇಲ್ಲಿದೆ. ಕ್ಲಿಕ್ ಮಾಡಿರಿ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಂಗಳೂರಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ದೃಢ: ಒಟ್ಟು 5 ಕೇಸ್"
Be the first to comment on "ಮಂಗಳೂರಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ದೃಢ: ಒಟ್ಟು 5 ಕೇಸ್"