ಹೋಮ್ ಕ್ವಾರಂಟೈನ್ ನಲ್ಲಿ 2,771 ಮಂದಿ

ಕೊರೊನಾ ಶಂಕೆ ಹಿನ್ನೆಲೆ ಮಂಗಳೂರಿನಲ್ಲಿ ಬುಧವಾರ 10 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮಂಗಳೂರಿನಲ್ಲಿ ಈವರೆಗೆ ಒಟ್ಟು ಐದು ಮಂದಿಗೆ ‌ಕೊರೊನಾ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 14 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ಬಂದಿದ್ದು, ಇದರಲ್ಲಿ ಎಲ್ಲರದ್ದು ನೆಗೆಟಿವ್ ಬಂದಿದೆ. ಮಂಗಳೂರಿನಲ್ಲಿ ಈವರೆಗೆ ಒಟ್ಟು ಐದು ಮಂದಿಗೆ ‌ಕೊರೊನಾ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಬುಧವಾರ 59 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,005 ಜನರನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್​​ನಲ್ಲಿ 2,771 ಮಂದಿ ಇದ್ದು, 27 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​​ನಲ್ಲಿದ್ದಾರೆ. ಇಂದಿಗೆ 20 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಜಿಲ್ಲೆಯಲ್ಲಿ ಇಂದು 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ



 

 







 

 

Be the first to comment on "ಹೋಮ್ ಕ್ವಾರಂಟೈನ್ ನಲ್ಲಿ 2,771 ಮಂದಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*