ಕೊರೊನಾ ಶಂಕೆ ಹಿನ್ನೆಲೆ ಮಂಗಳೂರಿನಲ್ಲಿ ಬುಧವಾರ 10 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮಂಗಳೂರಿನಲ್ಲಿ ಈವರೆಗೆ ಒಟ್ಟು ಐದು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆ ಕಳುಹಿಸಲಾದ 14 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ಬಂದಿದ್ದು, ಇದರಲ್ಲಿ ಎಲ್ಲರದ್ದು ನೆಗೆಟಿವ್ ಬಂದಿದೆ. ಮಂಗಳೂರಿನಲ್ಲಿ ಈವರೆಗೆ ಒಟ್ಟು ಐದು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ
ಬುಧವಾರ 59 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,005 ಜನರನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 2,771 ಮಂದಿ ಇದ್ದು, 27 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಇಂದಿಗೆ 20 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಜಿಲ್ಲೆಯಲ್ಲಿ ಇಂದು 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.