ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಲು ಸ್ನೇಹಿತರ ಜೊತೆ ತೆರಳಿದ ಯುವಕನೋರ್ವ ಅಕಸ್ಮಾತ್ ಅಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮಾಣಿ ಕರ್ನಾಟಕ ಪ್ರೌಢ ಶಾಲೆ ಸಮೀಪ ಪಳಿಕೆ ನಿವಾಸಿ ಅಬ್ದುಲ್ ರಹೀಂ (31) ಮೃತಪಟ್ಟ ವ್ಯಕ್ತಿ. ಮಧ್ಯಾಹ್ನ ದ ಬಳಿಕ ಅವರು ತನ್ನ ಮೂವರು ಸ್ನೇಹಿತರಾದ ಸಮಾದ್, ಮುಸ್ತಫಾ ಮತ್ತು ಸಮಾದ್ ಎಂಬವರ ಜೊತೆಯಲ್ಲಿ ಬರಿಮಾರು ಕಡವಿನಬಾಗಿಲು ಎಂಬಲ್ಲಿ ನೇತ್ರಾವತಿ ನದಿಗೆ ಈಜಲು ತೆರಳಿದ್ದರು. ಆದರೆ ಸುಮಾರು 4 ಗಂಟೆಯ ವೇಳೆಗೆ ನೀರಿನಲ್ಲಿ ಈಜಾಡುತ್ತಿದ್ದ ಅವರು ಅಕಸ್ಮಾತ್ ಅಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮುಳುಗಿದ ಸುದ್ದಿ ತಿಳಿದ ಕ್ಷಣವೇ ಕಾರ್ಯಪವೃತ್ತರಾದ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸುಮಾರು 5.30 ಗಂಟೆ ವೇಳೆ ಗೆ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದ್ದು ಈಜುಗಾರರು ನದಿಯಿಂದ ಮೇಲಕ್ಕೆತ್ತಿ ಹಾಕಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…