ಪ್ರಮುಖ ಸುದ್ದಿಗಳು

ಕೊರೊನಾ ಒಟ್ಟು 7 ಪಾಸಿಟಿವ್ ಪ್ರಕರಣ ಹಿನ್ನೆಲೆ: ಶನಿವಾರ ಜಿಲ್ಲೆ ಸಂಪೂರ್ಣ ಬಂದ್

ಶುಕ್ರವಾರ ರಾತ್ರಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದ.ಕ.ಜಿಲ್ಲೆಯಲ್ಲಿ ಒಟ್ಟು 7 ಅದರಲ್ಲೂ ಶುಕ್ರವಾರ 2 ಪ್ರಕರಣಗಳು ಕೋವಿಡ್ 19 ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಶನಿವಾರ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ.

ಶನಿವಾರ ದ.ಕ. ಜಿಲ್ಲೆಯಲ್ಲಿ ಎಲ್ಲ ವಾಣಿಜ್ಯ ಚಟುವಟಿಕೆ, ವಾಣಿಜ್ಯ ವ್ಯವಹಾರಗಳು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಾಹೀರಾತು

ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಯಾವುದೇ ವಾಣಿಜ್ಯ ವ್ಯವಹಾರ ಇರುವುದಿಲ್ಲ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಪಾಸಿಟಿವ್ ಪ್ರಕರಣ ಏರಿಕೆ ಆಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದೇ ಇದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿ ಆಗಲಿವೆ. ಜನರ ಉತ್ತಮ ಭವಿಷ್ಯಕ್ಕಾಗಿ ತೆಗೆದುಕೊಳ್ಳುವ ಹಾಗೂ ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

www.bantwalnews.com Editor: Harish Mambady

STAY HOME STAY SAFE

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts