ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯ ನಡುವೆಯೂ ಬೆಳಗಿನ ಅವಧಿಯಲ್ಲಿ ನೀಡಲಾಗುತ್ತಿದ್ದ ಖರೀದಿಗೆ ಅವಕಾಶವನ್ನು ಹಿಂಪಡೆದು, ಕಳೆದ ಶನಿವಾರ, ಭಾನುವಾರ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್ ನಡೆಸಲಾಗಿತ್ತು. ಅದು ಸೋಮವಾರಕ್ಕೂ ಮುಂದುವರೆಯಲಿದೆ. ಹೀಗೆಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಇದ್ದರು.
ಆದರೆ ಮಂಗಳವಾರ ಬೆಳಗ್ಗೆ 6ರಿಂದ ಮಧ್ಯಾಹ್ನ 3ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗುವುದು. ಈ ವೇಳೆ ಕುಟುಂಬದ ಸದಸ್ಯನೊಬ್ಬನಷ್ಟೇ ಸಾಮಾಗ್ರಿ ಖರೀದಿಗೆ ಹೊರಗೆ ಬರಬೇಕು. ದಿನಸಿ ಅಂಗಡಿಯವರು ಅಧಿಕ ದರ ವಸೂಲಿ ಮಾಡಿದರೆ, ಪರವಾನಗಿ ರದ್ದುಗೊಳಿಸಲಾಗುತ್ತದೆ ಎಂದರು.
- ಸುದ್ದಿಗೋಷ್ಠಿಯ ಮುಖ್ಯಾಂಶಗಳು ಇವು.
- ಸೋಮವಾರ ಕೂಡಾ ದಕ್ಷಿಣ ಕನ್ನಡದಲ್ಲಿ ಸಂಪೂರ್ಣ ಬಂದ್
- ಮಂಗಳವಾರ ಬೆಳಿಗ್ಗೆ 6 ರಿಂದ ಸಂಜೆ 3 ಗಂಟೆವರೆಗೆ ದಿನಸಿ ಅಂಗಡಿಗಳು ಓಪನ್
- ಸಾಮಾಜಿಕ ಅಂತರ ಕಾಯ್ದುಕೊಂಡು ದಿನಸಿ ಸಾಮಾನುಗಳನ್ನು ಖರೀದಿಸಿ
- ಕುಟುಂಬದ ಒಬ್ಬ ವ್ಯಕ್ತಿ ಮಾತ್ರ ಅಂಗಡಿಗೆ ಬರಬೇಕು
- ನಿಗದಿತ ದರದಲ್ಲೇ ಆಹಾರ ಸಾಮಾಗ್ರಿಗಳನ್ನು ಕೊಡಬೇಕು
- ವ್ಯಾಪಾರಿಗಳು ದರ ಹೆಚ್ಚು ಮಾಡಿದ್ರೆ ಕಠಿಣ ಕಾನೂನು ಕ್ರಮ
- ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಮಾಡಲಾಗುವುದು
- ಮಂಗಳೂರಲ್ಲಿ ಇಂದಿರಾ ಕ್ಯಾಂಟಿನ್ ನಿಂದ ಆಹಾರ ಸರಬರಾಜು ವ್ಯವಸ್ಥೆ
Be the first to comment on "ಸೋಮವಾರ ಪೂರ್ತಿ ಬಂದ್, ಮಂಗಳವಾರ 6ರಿಂದ 3ವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ"