ಬಂಟ್ವಾಳ ಪುರಸಭೆ ಮತ್ತು ಅಗ್ನಿಶಾಮಕದಳ ಸಹಕಾರದೊಂದಿಗೆ ಕ್ರಿಮಿನಾಶಕ ದ್ರಾವಣ ಸಿಂಪಡಣಾ ಕಾರ್ಯ ಸೋಮವಾರ ಬೆಳಗ್ಗೆ ಬಿ.ಸಿ.ರೋಡಿನ ವಿವಿಧ ಭಾಗಗಳಲ್ಲಿ ನಡೆಯಿತು.
ಜಾಹೀರಾತು
ಬಿ.ಸಿ.ರೋಡಿನ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಕೈಕಂಬ ದ್ವಾರದ ಬಳಿ ಕಟ್ಟಡಗಳು, ಆರೋಗ್ಯ ಕೇಂದ್ರಗಳಲ್ಲಿ ಸಿಂಪಡಣೆ ನಡೆಯಿತು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಸೂಚನೆಯಂತೆ ಪುರಸಭೆಯ ಪರಿಸರ ಸಹಾಯಕ ಇಕ್ಬಾಲ್, ಅಗ್ನಿಶಾಮಕದಳದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಪ್ರಮುಖ ಅಗ್ನಿಶಾಮಕ ಜಯ, ಚಾಲಕ ರಾಜೇಶ್ ಶೆಟ್ಟಿ, ಅಗ್ನಿಶಾಮಕ ಪ್ರಸಾದ್, ಸುರೇಂದ್ರ ಕಾರ್ಯಾಚರಣೆ ನಡೆಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೊರೊನಾ ಕಾಟ – ಬಿ.ಸಿ.ರೋಡ್ ಪೇಟೆಯಲ್ಲಿ ದ್ರಾವಣ ಸಿಂಪಡಣೆ"
Be the first to comment on "ಕೊರೊನಾ ಕಾಟ – ಬಿ.ಸಿ.ರೋಡ್ ಪೇಟೆಯಲ್ಲಿ ದ್ರಾವಣ ಸಿಂಪಡಣೆ"