ಅಗತ್ಯ ವಸ್ತುಗಳಿಗೆ ನಿಗದಿತ ದರಕ್ಕಿಂತ ಅಧಿಕ ವಸೂಲಿ ಮಾಡಿದರೆ ಕಟ್ಟುನಿಟ್ಟಿನ ಕ್ರಮ: ಕೋಟ ಎಚ್ಚರಿಕೆ

ಅಗತ್ಯ ವಸ್ತುಗಳಿಗೆ ನಿಗದಿತ ದರಕ್ಕಿಂತ ಅಧಿಕ ವಸೂಲು ಮಾಡಿದರೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಪರವಾನಗಿ ಪಡೆದೂ ದಾಸ್ತಾನು ಇಟ್ಟವರು ಅಂಗಡಿಯನ್ನು ಮಾ.31ರಂದು ಬೆಳಗ್ಗೆ  6ರಿಂದ ಮಧ್ಯಾಹ್ನ 3ರವರೆಗೆ ತೆರೆಯಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಾಹೀರಾತು

ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇನ್ನು ಸ್ಥಳೀಯಾಡಳಿತ ಮಟ್ಟದ ಟಾಸ್ಕ್ ಫೋರ್ಸ್ ಕೊರೋನಾ ಹಿನ್ನೆಲೆಯಲ್ಲಿ ಸಕ್ರಿಯವಾಗಿ ಕಾರ್ಯಾಚರಿಸಬೇಕು ಎಂದು ಸೂಚಿಸಿದ ಅವರು, ಬಿಸಿಯೂಟಕ್ಕಾಗಿ ಶಾಲೆಗಳಿಗೆ ಪೂರೈಕೆಯಾದ ಅಕ್ಕಿಯನ್ನು ಪ್ರತಿ ವಿದ್ಯಾರ್ಥಿಗೂ ವಿತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಶಿಕ್ಷಕರಿಗೆ ತೊಂದರೆ ಆಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿತರಣೆ ನಡೆಸಲಾಗುತ್ತದೆ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು

ಸಜೀಪನಡು ಗ್ರಾಮದಲ್ಲಿ ಯಾವುದೇ ಮೂಲಭೂತ ಅವಶ್ಯಕತೆಗಳಿಗೆ ತೊಂದರೆಯಾಗದಂತೆ ಸೂಚನೆ ನೀಡಲಾಗಿದ್ದು, ಕೊರೊನೋ ಸೋಂಕಿತ ಮಗು ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದರು. ಕೊರೊನೊ ಹಿನ್ನೆಲೆಯಲ್ಲಿ ಕೃಷಿ ಕಾರ್ಯಗಳಿಗೆ ಅಡ್ಡಿಯಾಗದು. ಕಟಾವು ಯಂತ್ರಗಳ ಸಾಗಾಟಕ್ಕೆ ಪಾಸ್ ನೀಡುವ ಕುರಿತು ಚರ್ಚಿಸಲಾಗಿದೆ ಎಂದವರು ಹೇಳಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ದ.ಕ.ಸಂಸದ ನಳಿನ್‌ಕುಮಾರ್ ಕಟೀಲು, ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಗತ್ಯ ವಸ್ತುಗಳಿಗೆ ನಿಗದಿತ ದರಕ್ಕಿಂತ ಅಧಿಕ ವಸೂಲಿ ಮಾಡಿದರೆ ಕಟ್ಟುನಿಟ್ಟಿನ ಕ್ರಮ: ಕೋಟ ಎಚ್ಚರಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*