ಕೊರೊನಾ ತಡೆ ಹಿನ್ನೆಲೆಯಲ್ಲಿ ಈ ಕ್ರಮ
ಬಂಟ್ವಾಳನ್ಯೂಸ್ ಸಂಪಾದಕ: ಹರೀಶ ಮಾಂಬಾಡಿ
ರಾಷ್ಟ್ರವ್ಯಾಪಿ ಪಸರಿಸುವ ಕೊರೋನ ವೈರಸ್/ ಕೋವಿಡ್ – ೧೯ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸದ್ರಿ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅವಿರತ ಶ್ರಮಿಸುತ್ತಿದ್ದು ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಜ್ವರ ಕ್ಲಿನಿಕ್ಗಳನ್ನು ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 13 ಜ್ವರದ ಚಿಕಿತ್ಸಾಲಯಗಳನ್ನು ತೆರೆಯಲಾಗಿದ್ದು ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಲು ಈ ಮೂಲಕ ತಿಳಿಸಿದೆ. ಸಂಸ್ಥೆಗಳ ವಿವರ ಈ ಕೆಳಗಿನಂತಿದೆ.