ಕೋವಿಡ್-19 ಕೊರೊನ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣ ಕಾರ್ಯಪಡೆ ಸಮಿತಿ ಸಭೆ ಮಂಗಳವಾರ ಇರಾದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು,
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಹಲವಾರು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ, ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ರೇಶನ್ ಅಂಗಡಿಯ ಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಪಂಚಾಯತ್ ಕಾರ್ಯದರ್ಶಿ ನಳಿನಿ ಎ.ಕೆ. ಸ್ವಾಗತಿಸಿ, ಪಿ.ಡಿ.ಒ ಸುಶೀಲ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಇರಾ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವಠಾರದಲ್ಲಿ ಸಾಮೂಹಿಕ ಜಾಗೃತಿಯನ್ನು ಮೂಡಿಸಲಾಯಿತು.