ಬಂಟ್ವಾಳ

ಇರಾ: ಕೊರೊನಾ ಗ್ರಾಮೀಣ ಕಾರ್ಯಪಡೆ ಸಮಿತಿ ಸಭೆ

ಕೋವಿಡ್-19 ಕೊರೊನ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣ ಕಾರ್ಯಪಡೆ ಸಮಿತಿ ಸಭೆ ಮಂಗಳವಾರ ಇರಾದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು,

ಜಾಹೀರಾತು

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ  ಮತ್ತು ಸುರಕ್ಷತೆಯ ದೃಷ್ಟಿಯಿಂದ ಹಲವಾರು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ, ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ರೇಶನ್ ಅಂಗಡಿಯ ಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಪಂಚಾಯತ್ ಕಾರ್ಯದರ್ಶಿ ನಳಿನಿ ಎ.ಕೆ. ಸ್ವಾಗತಿಸಿ, ಪಿ.ಡಿ.ಒ ಸುಶೀಲ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಇರಾ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವಠಾರದಲ್ಲಿ ಸಾಮೂಹಿಕ ಜಾಗೃತಿಯನ್ನು ಮೂಡಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ