ಏ.3ರಿಂದ ರಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಾಂದ್ಯಂತ ಯಾವುದೇ ಖಾಸಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ದಿನ ಬಳಕೆ ಸಾಗಾಣಿಕ ವಾಹನಗಳನ್ನು ಹೊರತುಪಡಿಸಿ ಇತರೆ ತುರ್ತು ಸೇವೆಗಳಾದ ಆರೋಗ್ಯ ಇಲಾಖೆ, ಬ್ಯಾಂಕ್ ನೌಕರರು, ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಅಗತ್ಯ ಸೇವೆಗಳ ಸಿಬ್ಬಂದಿಗಳು ತಮ್ಮ ಗುರುತು ಚೀಟಿಯನ್ನು ತೋರಿಸಿ ಕರ್ತವ್ಯಕ್ಕೆ ತೆರಳಬಹುದಾಗಿದೆ. ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಲು ಈಗಾಗಲೇ ನಿಗಧಿಯಾಗಿರುವಂತೆ ಬೆಳಿಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ ತೆರಳುವ ಸಾರ್ವಜನಿಕರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳಬಹುದಾಗಿದೆ.ಅಟೋರಿಕ್ಷಾ/ಇತರೆ ಯಾವುದೇ ಬಾಡಿಗೆ ವಾಹನದಲ್ಲಿ ದಿನಬಳಕೆಯ ಸಾಮಾಗ್ರಿ ಖರೀದಿಗೆ ತೆರಳುವವರು ಇತರೆ ಯಾವುದೇ ಜನರನ್ನು ಒಯ್ಯುವಂತಿಲ್ಲ. ಇವುಗಳನ್ನು ಹೊರತುಪಡಿಸಿ ಯಾವುದೇ ವೈಧ್ಯಕೀಯ ತುರ್ತು ಸಮಯದಲ್ಲಿ 108 ಅಥವಾ 1077 ಕರೆ ಮಾಡಬಹುದಾಗಿದೆ. ವೈಧ್ಯಕೀಯ ತುರ್ತು ಸಮಯದಲ್ಲಿ ಖಾಸಗಿ ವಾಹನದ ಬಳಕೆಗಾಗಿ 1077 ಗೆ ಕರೆಮಾಡಿ ಪಾಸ್ ಪಡೆಯಲು ವ್ಯವಸ್ಥೆ ಮಾಡಲಾಗಿರುತ್ತದೆ. ಸಾರ್ವಜನಿಕರು ಸಹಕರಿಸಲು ಅವರು ವಿನಂತಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಖಾಸಗಿ ವಾಹನಗಳ ಸಂಚಾರಕ್ಕೆ ಹಲವು ನಿರ್ಬಂಧ"
Be the first to comment on "ಖಾಸಗಿ ವಾಹನಗಳ ಸಂಚಾರಕ್ಕೆ ಹಲವು ನಿರ್ಬಂಧ"