ಕೋವಿಡ್ 19: ದ.ಕ. ಜಿಲ್ಲೆಯಲ್ಲಿ 3 ಪಾಸಿಟಿವ್ ಪ್ರಕರಣ ಪತ್ತೆ

  • 28 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆಗೆ

ಕೋವಿಡ್ 19ಗೆ ಸಂಬಂಧಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 3 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 279 ಮಂದಿಯ ಗಂಟಲು ದ್ರವ ಮಾದರಿಯನ್ನು ಕಳುಹಿಸಿದ್ದರಲ್ಲಿ 12 ಪಾಸಿಟಿವ್ ಕೇಸ್ ಪತ್ತೆಯಾದಂತಾಗಿದೆ.

ಜಾಹೀರಾತು

ಒಟ್ಟು  43 ಮಂದಿಯ ಗಂಟಲು ದ್ರವ ಮಾದರಿಯ ತಪಾಸಣಾ ವರದಿ ಶನಿವಾರ ಬಂದಿದ್ದು, ಇವುಗಳಲ್ಲಿ 3 ಪಾಸಿಟಿವ್ ಪತ್ತೆಯಾಗಿದೆ. 40 ನೆಗೆಟಿವ್ ಕಂಡುಬಂದಿದೆ ಎಂದವರು ಮಾಹಿತಿ ನೀಡಿದ್ದಾರೆ.

ಶನಿವಾರ 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಐವರನ್ನು ನಿಗಾದಲ್ಲಿ ಇರಿಸಲಾಗಿದೆ.  ಒಟ್ಟು ಹೋಂ ಕ್ವಾರಂಟೈನ್ ನಲ್ಲಿ ಇರುವವರು 4629.

ಉಡುಪಿ ಜಿಲ್ಲೆ ನಿವಾಸಿ ಮಾ.21ರಂದು ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಇವರ ಗಂಟಲು ದ್ರವ ಮಾದರಿಯನ್ನು ಏ.2ರಂದು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಏ.4ರಂದು ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಬಂಟ್ವಾಳ ತಾಲೂಕು ತುಂಬೆ ಗ್ರಾಮದ 43 ವರ್ಷದ ವ್ಯಕ್ತಿಯೊಬ್ಬರು ಮಾ.11ರಂದು ದೆಹಲಿಗೆ ಪ್ರಯಾಣಿಸಿದ್ದು, 22ರಂದು ಹಿಂದಿರುಗಿದ್ದಾರೆ. ಏ.2ರಂದು ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಂದು ಸೋಂಕು ದೃಢಪಟ್ಟಿದೆ. ಇನ್ನೋರ್ವ ವ್ಯಕ್ತಿ 52 ರ ಹರೆಯದ ತೊಕ್ಕೊಟ್ಟು ನಿವಾಸಿ ಮುಂಬೈಗೆ ಫೆ.6ರಂದು ತೆರಳಿದ್ದು, ಅಲ್ಲಿಂದ ದೆಹಲಿಗೆ ಪ್ರಯಾಣಿಸಿದ್ದಾರೆ. ದೆಹಲಿಯಿಂದ ಮಂಗಳೂರಿಗೆ ಮಾ.20ರಂದು ಆಗಮಿಸಿದ್ದಾರೆ ಎಲ್ಲರನ್ನೂ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೋವಿಡ್ 19: ದ.ಕ. ಜಿಲ್ಲೆಯಲ್ಲಿ 3 ಪಾಸಿಟಿವ್ ಪ್ರಕರಣ ಪತ್ತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*