ಭಾನುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಹೊರಡಿಸಿದ ಪ್ರಕಟಣೆಯ ಪ್ರಕಾರ, ಪರೀಕ್ಷೆಗೆಂದು ಕಳುಹಿಸಲಾಗಿದ್ದ 28 ಮಂದಿಯ ಗಂಟಲು ದ್ರವ ಮಾದರಿ ಗಳೆಲ್ಲವೂ ನೆಗೆಟಿವ್ ಆಗಿದ್ದು, ಯಾರಿಗೂ ಕೋವಿಡ್ 19 ಸೋಂಕು ಇರುವುದು ಪತ್ತೆಯಾಗಿಲ್ಲ. ಭಾನುವಾರ ಮತ್ತೆ 21 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು ಮೂವರನ್ನು ನಿಗಾ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದವರು ತಿಳಿಸಿದ್ದಾರೆ. ಅಲ್ಲದೆ ಮಾ.19ರಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ 22 ವರ್ಷದ ಭಟ್ಕಳ ಮೂಲದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯು ಸಂಪೂರ್ಣ ಗುಣಮುಖರಾಗಿದ್ದಾರೆ. ಏ.2ರಂದು ಮತ್ತು ಏ.3ರಂದು ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ವರದಿಯು ನೆಗೆಟಿವ್ ಬಂದಿರುತ್ತದೆ. ಇವರನ್ನು ಏ.6ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದುವರೆಗೆ 1342 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದು, ಅವರಲ್ಲಿ ಕೊರೊನಾ ಸೋಂಕು ಕಂಡುಬಂದಿಲ್ಲ. 331 ಮಂದಿಯ ಸ್ಯಾಂಪಲ್ ಕಳುಹಿಸಲಾಗಿದ್ದು, 310 ಮಂದಿಯ ರಿಪೋರ್ಟ್ ಬಂದಿದೆ. ಇವರಲ್ಲಿ 298 ನೆಗೆಟಿವ್, 12 ಪಾಸಿಟಿವ್ ಪತ್ತೆಯಾಗಿತ್ತು. ಅವರ ಪೈಕಿ ಒಬ್ಬರು ನಾಳೆ ಗುಣಮುಖರಾಗುತ್ತಿರುವುದು ಸಂತಸದ ವಿಚಾರವಾಗಿದೆ.