ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಕೆಲ ಭಾಗಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ, ಅವಶ್ಯಕ ಸೇವೆಗಳಿಗೆ ತೊಡಕಾಗದಂತೆ ಹಾಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಮಂಗಳೂರು ಶಾಸಕ ಯು.ಟಿ.ಖಾದರ್ ಅಧಿಕಾರಿಗಳಿಗೆ ಸೂಚಿಸಿದರು.
ತುಂಬೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಅವರು ತುಂಬೆ ಗ್ರಾ.ಪಂ. ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಮಂಗಳೂರು ತಾ.ಪಂ.ಅಧ್ಯಕ್ಷ ಮೊಹಮ್ಮದ್ ಮೋನು, ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯ ಗಣೇಶ್ ಸುವರ್ಣ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮಾಂತರ ಪಿಎಸ್ಐ ಪ್ರಸನ್ನ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುದರ್ಶನ್, ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ, ಪಿಡಿಒ ಚಂದ್ರಾವತಿ, ತುಂಬೆ ಜುಮಾ ಮಸೀದಿಯ ಅಧ್ಯಕ್ಷ ಇಮ್ತಿಯಾಜ್ ಆಲ್ಫಾ, ಪ್ರಧಾನ ಕಾರ್ಯದರ್ಶಿ ಮೂಸಬ್ಬ, ಗ್ರಾ.ಪಂ.ಸದಸ್ಯರು, ಸ್ಥಳೀಯ ವರ್ತಕರು ಸಭೆಯಲ್ಲಿ ಪಾಲ್ಗೊಂಡಿದ್ದರು.