ಈಗಾಗಲೇ ದ.ಕ.ದಲ್ಲಿ 4 ಪ್ರಕರಣ ದಾಖಲು – ಎಸ್ಪಿ ಲಕ್ಷ್ಮೀಪ್ರಸಾದ್
ಜಾಹೀರಾತು
ಒಂದು ನಿರ್ದಿಷ್ಟ ಕೋಮನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂತನಾತ್ಮಕವಾಗಿ ಹಾಗೂ ಕೋಮು ಪ್ರಚೋದನಕಾರಿಯಾಗಿ ಸುದ್ದಿಗಳನ್ನು ಪ್ರಸಾರಪಡಿಸುವುದು ಕಂಡುಬಂದಿದ್ದು, ಈಗಾಗಲೇ ದ.ಕ. ಜಿಲ್ಲೆ ಪೊಲೀಸ್ ವ್ಯಾಪ್ತಿಯಲ್ಲಿ 4 ಪ್ರಕರಣಗಳು ದಾಖಲಾಗಿವೆ ಎಂದು ಪ್ರಕಟಣೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿಯೂ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತೆ ಫೇಸ್ ಬುಕ್, ವಾಟ್ಸ್ ಆಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಸುದ್ದಿ, ಚಿತ್ರಗಳನ್ನು ಪ್ರಸಾರಪಡಿಸಿದಲ್ಲಿ, ಅಂಥ ಕಿಡಿಗೇಡಿಗಳ ಮೊಬೈಲ್ ವಶಪಡಿಸಿಕೊಳ್ಳಲಾಗುವುದು. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಇಂಥ ಕುಕೃತ್ಯದಲ್ಲಿ ಭಾಗಿಯಾಗಿದ್ದರೆ, ಅಂಥವರನ್ನೂ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿಟ್ಟು ಅವಧಿ ಮುಗಿದ ಕೂಡಲೇ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದಕ, ನಿಂದನಾತ್ಮಕ ಬರೆಹ ಕಂಡುಬಂದರೆ ಕ್ರಿಮಿನಲ್ ಕೇಸ್"
Be the first to comment on "ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದಕ, ನಿಂದನಾತ್ಮಕ ಬರೆಹ ಕಂಡುಬಂದರೆ ಕ್ರಿಮಿನಲ್ ಕೇಸ್"