ಒಂದು ನಿರ್ದಿಷ್ಟ ಕೋಮನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂತನಾತ್ಮಕವಾಗಿ ಹಾಗೂ ಕೋಮು ಪ್ರಚೋದನಕಾರಿಯಾಗಿ ಸುದ್ದಿಗಳನ್ನು ಪ್ರಸಾರಪಡಿಸುವುದು ಕಂಡುಬಂದಿದ್ದು, ಈಗಾಗಲೇ ದ.ಕ. ಜಿಲ್ಲೆ ಪೊಲೀಸ್ ವ್ಯಾಪ್ತಿಯಲ್ಲಿ 4 ಪ್ರಕರಣಗಳು ದಾಖಲಾಗಿವೆ ಎಂದು ಪ್ರಕಟಣೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿಯೂ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತೆ ಫೇಸ್ ಬುಕ್, ವಾಟ್ಸ್ ಆಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಸುದ್ದಿ, ಚಿತ್ರಗಳನ್ನು ಪ್ರಸಾರಪಡಿಸಿದಲ್ಲಿ, ಅಂಥ ಕಿಡಿಗೇಡಿಗಳ ಮೊಬೈಲ್ ವಶಪಡಿಸಿಕೊಳ್ಳಲಾಗುವುದು. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಇಂಥ ಕುಕೃತ್ಯದಲ್ಲಿ ಭಾಗಿಯಾಗಿದ್ದರೆ, ಅಂಥವರನ್ನೂ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿಟ್ಟು ಅವಧಿ ಮುಗಿದ ಕೂಡಲೇ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.