ಜಿಲ್ಲಾ ಸುದ್ದಿ

ದ.ಕ. ಜಿಲ್ಲೆಯ ಮೊದಲ ಪ್ರಕರಣವಿದು: ಕರೋನಾದಿಂದ ಗುಣಮುಖನಾಗಿ ಊರಿಗೆ ತಲುಪಿದ ಯುವಕ

  • ಆತ್ಮವಿಶ್ವಾಸವಿದ್ದರೆ ಸೋಂಕು ಎದುರಿಸಲು ಸಾಧ್ಯ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಕರೋನಾ ಪ್ರಕರಣ ವರದಿಯಾಗಿದ್ದ ಭಟ್ಕಳದ ಯುವಕ ಸಂಪೂರ್ಣ ಗುಣಮುಖನಾಗಿ ಸೋಮವಾರ ಮುಂಜಾನೆ ತನ್ನಊರಿಗೆ ತೆರಳಿದರು.

ಜಾಹೀರಾತು

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಈ ಯುವಕ ಮಾರ್ಚ್ 16ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದನು. ಅಲ್ಲಿ ತಪಾಸಣೆ ಸಂದರ್ಭ ರೋಗ ಲಕ್ಷಣಗಳಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಂದಲೇ ಆಂಬುಲೆನ್ಸ್ ನಲ್ಲಿ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿ, ಮಾ.22 ರಂದು ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು.

ಬಳಿಕ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ವ್ಯಕ್ತಿಯ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಂಡುಬಂದಿದ್ದು, ಸಂಪೂರ್ಣ ಗುಣಮುಖನಾಗಿ ಸೋಮವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ, ಭಟ್ಕಳಕ್ಕೆ ತೆರಳಿದ ಯುವಕನು, ಸದ್ಯ ಮನೆಯಲ್ಲಿಯೂ ಪ್ರತ್ಯೇಕವಾಗಿ ಇರಲಿದ್ದಾರೆ.

ಜಿಲ್ಲೆಯ ಪ್ರಥಮ ಪ್ರಕರಣ ಇದಾಗಿದ್ದರಿಂದ ಜಿಲ್ಲಾಡಳಿತ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಂಡಿತು.

ಜಾಹೀರಾತು

ಅದರಲ್ಲೂ ವೆನ್‌ಲಾಕ್‌ ಆಸ್ಪತ್ರೆಗೆ ಇದೊಂದು ಸವಾಲಿನ ಪ್ರಕರಣವಾಗಿತ್ತು. ರೋಗಿಯನ್ನು ಸಂಪೂರ್ಣವಾಗಿ ಪ್ರತ್ಯೇಕವಾಗಿಡುವುದರೊಂದಿಗೆ ರೋಗಕ್ಕೆ ಚಿಕಿತ್ಸೆ ನೀಡುವುದೂ ಮಹತ್ವದ್ದಾಗಿತ್ತು. ಈ ನಿಟ್ಟಿನಲ್ಲಿ ವೆನ್‌ಲಾಕ್‌ ಅಧೀಕ್ಷಕರು, ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಗಳು ತಮ್ಮ ಪೂರ್ಣ ಸೇವೆಯನ್ನು ಮೀಸಲಿಟ್ಟು, ಅಂತಿಮವಾಗಿ ರೋಗಿಯನ್ನು ಗುಣಮುಖಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ, ಜಗತ್ತನ್ನೇ ನಲುಗಿಸಿರುವ ಕರೋನಾ ಸಾಂಕ್ರಾಮಿಕ ಕಾಯಿಲೆ ವಿರುದ್ಧ ವೆನ್‌ಲಾಕ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಮೊದಲ ಯಶಸ್ಸುದೊರಕಿದೆ.

ಬೆಳ್ಳಂಬೆಳಿಗ್ಗೆ ಊರಿನತ್ತ: ಕರೋನಾದಿಂದ ಗುಣಮುಖನಾದ ಭಟ್ಕಳದ 22ರ ಹರೆಯದ ಈ ಯುವಕನು, ಸೋಮವಾರ ಬೆಳಿಗ್ಗೆ ತನ್ನಊರಿನತ್ತ ತೆರಳಿದರು. ಹೋಗುವಾಗ, ಯುವಕನು ಇಷ್ಟು ದಿನ ವೆನ್‌ಲಾಕ್‌ನಲ್ಲಿ ತನಗೆ ಚಿಕಿತ್ಸೆ ನೀಡಿ, ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಿದ ವೆನ್‌ಲಾಕ್ ವೈದ್ಯರಿಗೆ, ಸಿಬ್ಬಂದಿಗಳಿಗೆ ಗೌರವಿಸಿದರು. ದುಬೈಯಲ್ಲಿ ಕಳೆದ 2 ವರ್ಷಗಳಿಂದ ಬ್ರಾಂಡೆಡ್ ವಾಚ್ ವ್ಯಾಪಾರ ಮಾಡುತ್ತಿದ್ದ ಈ ಯುವಕ, ವೆನ್‌ಲಾಕ್‌ನಲ್ಲಿ ತನಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗಿದೆ. ತನ್ನನ್ನು ಬಹಳ ಪ್ರೀತಿಯಿಂದ ಇಲ್ಲಿ ಕಾಣಲಾಯಿತು. ಯಾವುದೇ ಸಮಸ್ಯೆಯಾಗದಂತೆ ಇಷ್ಟು ದಿನ ನೋಡಿಕೊಳ್ಳಲಾಗಿದೆ. ತಿನ್ನಲು ಉತ್ತಮ ಆಹಾರವನ್ನೂ ನೀಡಲಾಗಿದೆ ಎಂದು ತನ್ನ ಸಂತೋಷ ಹಂಚಿಕೊಂಡರು.

ನನಗೆ ಈ ರೋಗ ಹೇಗೆ ಬಂತು ಎಂಬ ನಿಖರ ಕಾರಣ ತಿಳಿದಿಲ್ಲ ಎಂದು ಸ್ಪಷ್ಟಪಡಿಸುತ್ತಾ, ಪಾಸಿಟಿವ್ ದೃಢಪಟ್ಟನಂತರ, ನಾನೇ ಎಲ್ಲರಿಂದಲೂ ಸಂಪೂರ್ಣಅಂತರ ಕಾಯ್ದುಕೊಂಡೆ ಎಂದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕರೋನಾ ಬಗ್ಗೆ ಸಾಕಷ್ಟು ಭಯಭೀತಿ ಮೂಡಿಸುವಂತೆ ಮಾಡಲಾಗುತ್ತಿದೆ ಎಂಧರು.

ಜಾಹೀರಾತು

ಕರೋನಾ ವೈರಸ್ ನಮ್ಮದೇಹ ಪ್ರವೇಶಿಸುವುದು ಗೊತ್ತಾಗುವಾಗ ಹಲವು ದಿನಗಳು ಕಳೆದಿರುತ್ತದೆ.ನಮ್ಮಓಡಾಟ ನಿಯಂತ್ರಿಸುವುದು ಪ್ರಾಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಲಾಕ್‌ಡೌನ್ ಸರಕಾರದ ದಿಟ್ಟಹೆಜ್ಜೆಯಾಗಿದ್ದು, ಸರಕಾರದ ನಿರ್ದೇಶನದಂತೆ ಎಲ್ಲರೂ ಮನೆಯೊಳಗೆ ಇರುವುದು ಅಗತ್ಯವಾಗಿದೆ. ನಾನು ವಿಮಾನ ನಿಲ್ದಾಣದಿಂದಲೇ ನೇರವಾಗಿಆಸ್ಪತ್ರೆಗೆದಾಖಲಾಗಿದ್ದರಿಂದ, ಊರಿಗೆ ತೆರಳಿ ಬಳಿಕ ಕುಟುಂಬಸ್ಥರಿಗೆ, ಊರಿನವರಿಗೆರೋಗ ಹರಡುವುದುತಪ್ಪಿತು.ಇದಕ್ಕಾಗಿ ಜಿಲ್ಲಾಡಳಿತಕ್ಕೆ ತಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಎಂದು ಯುವಕ ಹೇಳಿದರು.

ಕರೋನಾ ರೋಗಕ್ಕೆ ಹೆದರುವ ಅಗತ್ಯವಿಲ್ಲ. ಆತ್ಮವಿಶ್ವಾಸ ಮುಖ್ಯವಾಗಿದೆ.ರೋಗಿಯು ಪ್ರತ್ಯೇಕವಾಗಿರುವುದು ಅಗತ್ಯ. ಒಬ್ಬಂಟಿಯಾಗಿರುವುದಕ್ಕೆ ಹೆದರುವ ಅಗತ್ಯವಿಲ್ಲ. ಯಾವುದೇ ಕಾರಣಕ್ಕೂಆತ್ಮವಿಶ್ವಾಸ ಕಳೆದುಕೊಳ್ಳಬಾರದು, ಸೋಂಕಿನ ವಿರುದ್ಧ ಹೋರಾಡಲು ನಮ್ಮಲ್ಲಿ ಧೈರ್ಯ ಮುಖ್ಯವಾಗಿದೆ ಎಂದರು.

ವೈದ್ಯರಚಿಕಿತ್ಸೆ, ದೇವರಅನುಗ್ರಹದಿಂದ ಇದೀಗ ತನ್ನಆರೋಗ್ಯ ಸಾಮಾನ್ಯ ಸ್ಥಿತಿಗೆ ಬಂದಿದೆ.ವೆನ್‌ಲಾಕ್‌ಆಸ್ಪತ್ರೆಯವೈದ್ಯರ, ಸಿಬ್ಬಂದಿಗಳ ನಿರಂತರಆರೈಕೆ ಪರಿಣಾಮತಾನುಗುಣಮುಖನಾಗುವಂತಾಯಿತು ಎಂದು ಸೋಂಕನ್ನು ಗೆದ್ದು ಬಂದ ಬಗ್ಗೆಅವರು ಹೇಳಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ