ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ವೈಯಕ್ತಿಕ ಧನ ಸಹಾಯದೊಂದಿಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್ ಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಕಡು ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಒದಗಿಸುವ ಕಾರ್ಯ ನಡೆಯಿತು. ರಾಯಿ ಯಲ್ಲಿ ಸೋಮವಾರ ಈ ಕಾರ್ಯಕ್ಕೆ ಸ್ವತಃ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…