www.bantwalnews.com Editor: Harish Mambady
ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದಲ್ಲಿ ಕಿಂಡಿ ಅಣೆಕಟ್ಟಿಗೆ ತಡೆಗೋಡೆ ನಿರ್ಮಿಸಲು ಗದಗ ಜಿಲ್ಲೆಯಿಂದ ಬಂದಿರುವ ಕೂಲಿಕಾರ್ಮಿಕರು ಕೊರೋನಾ ಲಾಕ್ ಡೌನ್ ನಿಂದಾಗಿ ನಿರಾಶ್ರಿತರಾಗಿದ್ದು, ಎಂಟು ಕುಟುಂಬಗಳ 19 ಜನರಿಗೆ, ಸಾಲೆತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಶ್ರಯ ಕಲ್ಪಿಸಲಾಯಿತು.
ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಸ್ಥಳಕ್ಕೆ ಭೇಟಿ ನೀಡಿ, ನಿರಾಶ್ರಿತರ ಅಹವಾಲು ಆಲಿಸಿ, ಅಗತ್ಯ ವ್ಯವಸ್ಥೆ ಬಗ್ಗೆ ಕ್ರಮಕೈಗೊಂಡರು. ಈ ಸಂದರ್ಭ ಸಂಕಷ್ಟ ಅನುಭವಿಸುತ್ತಿದ್ದ ಕುಟುಂಬದವರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲು ಅವರು ಸೂಚಿಸಿದರು ಈ ಸಂದರ್ಭ ವಿಟ್ಲ ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ, ಸಾಲೆತ್ತೂರು ಗ್ರಾ.ಪಂ.ಕಾರ್ಯದರ್ಶಿ, ಸಾಲೆತ್ತೂರು ಗ್ರಾಮ ಲೆಕ್ಕಾಧಿಕಾರಿ ಅನಿಲ್,ಗ್ರಾಮ ಸಹಾಯಕ ಮಹಾಬಲ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…