ಶುಭಸುದ್ದಿ: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಪ್ರಕರಣಗಳಿಲ್ಲ

  • ಏಳು ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ಲ್ಯಾಬ್ ಗೆ

ದ.ಕ.ಜಿಲ್ಲೆಯಲ್ಲಿ ಯಾವುದೇ ಕೋವಿಡ್ 19 ಹೊಸ ಪ್ರಕರಣಗಳು ಮಂಗಳವಾರವೂ ವರದಿಯಾಗಿಲ್ಲ ಹಾಗೂ ಕೇವಲ 7 ಮಂದಿಯದ್ದಷ್ಟೇ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ನಿಗಾದಲ್ಲಿ ಮೂವರು ಇದ್ದಾರೆ. ಈಗಾಗಲೇ 341 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ ಸಂದರ್ಭ 329 ಮಂದಿಯದ್ದು ನೆಗೆಟಿವ್ ಬಂದಿತ್ತು. 12 ಪಾಸಿಟಿವ್ ಕೇಸುಗಳು ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಅವರಲ್ಲಿ ನಾಲ್ವರು ಗುಣಮುಖರಾಗಿ ತೆರಳಿದ್ದಾರೆ. ಈಗ 8 ಮಂದಿಯಷ್ಟೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಇನ್ನೊಂದು ಸಂಗತಿಯೆಂದರೆ 1989 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಇದೀಗ 3930 ಮಂದಿ ಹೋಂ ಕ್ವಾರಂಟೈನ್ ನಲ್ಲಿ ಇದ್ದು, 10 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ.

ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಕೋವಿಡ್ ಪ್ರಯೋಗಾಲಯ ಇಂದಿನಿಂದ ಅಧಿಕೃತ ವಾಗಿ ಕಾರ್ಯಾಚರಣೆ ಆರಂಭಗೊಂಡಿದೆ. ಮೊದಲ ದಿನ 10  ಗಂಟಲ ದ್ರವ ಮಾದರಿಗಳ ಪರೀಕ್ಷೆ ನಡೆದಿದೆ. ಡಾ. ಶರತ್, ರೋಗಶಾಸ್ತ್ತಜ್ಞರು,  (pathologist) ಈ ಪ್ರಯೋಗಲಯದ ಮೇಲ್ವಿಚಾರಕರಾಗಿದ್ದಾರೆ. ಈ ಪ್ರಯೋಗಾಲಯದಿಂದಾಗಿ ಆಯಾ ದಿನವೇ ಪರೀಕ್ಷಾ ವರದಿ ಲಭಿಸಲಿದೆ.

www.bantwalnews.com Editor: Harish Mambady

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶುಭಸುದ್ದಿ: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಪ್ರಕರಣಗಳಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*