ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ 2 ತಿಂಗಳ ಪಡಿತರ ಅಕ್ಕಿ ವಿತರಣೆಯ ಕಾರ್ಯ ನಡೆಯುತ್ತಿದ್ದು, ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ ಪೇಟೆಯ ನ್ಯಾಯಬೆಲೆ ಅಂಗಡಿಗೆ ತೆರಳಿ ವಿತರಣಾ ಕಾರ್ಯವನ್ನು ಪರಿಶೀಲಿಸಿದರು.
www.bantwalnews.com Editor: Harish Mambady
ಬಳಿಕ ಶಾಸಕರು ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಜತೆಗೆ ಬಂಟ್ವಾಳದಲ್ಲಿ ಕೊರೊನಾ ವೈರಸ್ ಕುರಿತ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಿದರು.
ತಾಲೂಕಿನಲ್ಲಿ ಪಡಿತರ ಅಕ್ಕಿ ವಿತರಣೆಯ ಕಾರ್ಯ ನಡೆಯುತ್ತಿದ್ದು, ಕೆಲವೆಡೆ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದಿತ್ತು. ಇನ್ನು ಕೆಲವೆಡೆ ಪಡಿತರ ಅಕ್ಕಿ ಮುಗಿದಿದ್ದು, ಅಲ್ಲಿಗೆ ಅಕ್ಕಿ ಪೂರೈಕೆಯೂ ಆಗಬೇಕಿದೆ. ಉಳಿದಂತೆ ಅಕ್ಕಿ ವಿತರಣೆಯ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಸುದರ್ಶನ್ ಬಜ ಶಾಸಕರ ಜತೆಗಿದ್ದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)